ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಆಸ್ತಿಗಾಗಿ ಹೆಣ್ಣುಮಗುವನ್ನು ಕೂಡಿಟ್ಟಿದ್ದ ಡಿಕೆಶಿ : HD ದೇವೇಗೌಡ ಆರೋಪ

Published 17 ಏಪ್ರಿಲ್ 2024, 11:28 IST
Last Updated 17 ಏಪ್ರಿಲ್ 2024, 11:28 IST
ಅಕ್ಷರ ಗಾತ್ರ

‘ಬಿಡದಿ ಬಳಿಯ ರಸ್ತೆ ಬದಿಯ ಜಾಗ ಬರೆಸಿಕೊಳ್ಳಲು ಒಂಬತ್ತು ವರ್ಷದ ಹೆಣ್ಣು ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಕೂಡಿ ಹಾಕಿದ್ದರಲ್ಲ ಅದಕ್ಕೆ ಅವರ ಕೈ ಇನ್ನಷ್ಟು ಬಲಪಡಿಸಬೇಕಾ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ‘ಅಮೆರಿಕದಲ್ಲಿ ದುಡಿದು ತಂದಿದ್ದ ಹಣದಲ್ಲಿ ಉದ್ಯಮಿಯೊಬ್ಬರು ಬಿಡದಿ ಬಳಿ ಐ.ಟಿ ಕಂಪನಿ ಸ್ಥಾಪನೆ ಮಾಡಲು ಮುಂದಾಗಿದ್ದರು. ಅದರ ಹಿಂದಿನ ದಿನ ಇವರು ಸುಳ್ಳು ಕ್ರಯಪತ್ರ ಸಿದ್ಧಡಿಸುತ್ತಾರೆ. ನನ್ನ ಬಳಿ ದಾಖಲೆ ಇದೆ ಎಂದು ಅದನ್ನು ಮುಂದಿಟ್ಟುಕೊಂಡು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುತ್ತಾರೆ. ಎರಡೂ ಕಡೆ ಮುಖಭಂಗವಾಗುತ್ತದೆ. ಆ ಬಳಿಕ ಆ ವ್ಯಕ್ತಿಯ ಮಗಳನ್ನು ಗಂಗಮ್ಮ ತಿಮ್ಮಯ್ಯ ಕಲ್ಯಾಣ ಮಂಟಪದ ಪಕ್ಕದ ಮನೆಯಲ್ಲಿ ಒಂಬತ್ತು ದಿನ ಇಡುತ್ತಾರೆ. ಆಸ್ತಿ ಪತ್ರಕ್ಕೆ ಸಹಿ ಹಾಕಿ ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎನ್ನುತ್ತಾರೆ. ಇಂಥವರ ಕೈ ಬಲಪಡಿಸಬೇಕಾ’ ಎಂದು ಮರುಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT