ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ’ದಕ್ಷಿಣ’ದಲ್ಲಿ ಹಣ ಅಕ್ರಮ ಸಾಗಣೆ: ಡಿ.ಕೆ.ಶಿವಕುಮಾರ್‌ ಆರೋ‍ಪ

Published 22 ಏಪ್ರಿಲ್ 2024, 14:28 IST
Last Updated 22 ಏಪ್ರಿಲ್ 2024, 14:28 IST
ಅಕ್ಷರ ಗಾತ್ರ

ಬೆಂಗಳೂರು: ‘‌ತೇಜಸ್ವಿ ಸೂರ್ಯ ಕಣದಲ್ಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯವರು ಅಕ್ರಮವಾಗಿ ಹಣ ಸಾಗಣೆ ಮಾಡಿದ್ದಾರೆ ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋ‍ಪಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಎಲ್ಲ ಕಡೆ ಹಂಚಲು ಬಿಜೆಪಿಯವರು ತೆಗೆದುಕೊಂಡು ಹೋಗುತ್ತಿದ್ದ ₹2 ಕೋಟಿಯನ್ನು ಚುನಾವಣಾ ಅಧಿಕಾರಿಗಳು ಕಾಟನ್ ಪೇಟೆಯಲ್ಲಿ ಜಪ್ತಿ ಮಾಡಿದ್ದರು. ಹೀಗೆ ಹಲವು ಕಡೆಗಳಲ್ಲಿ ಬಿಜೆಪಿಯವರು ಸುಮಾರು ಹಣ ಸಾಗಿಸಿದ್ದಾರೆ’ ಎಂದು ದೂರಿದರು.

‘ಜಪ್ತಿ ಮಾಡಿರುವ ಹಣ ವಶಪಡಿಸಿಕೊಂಡಿರುವ ಪ್ರಕರಣವನ್ನು ಅಧಿಕಾರಿಗಳ ಮೂಲಕ ಮುಚ್ಚಿ ಹಾಕಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಪ್ರತಿಯೊಂದು ಕ್ಷೇತ್ರದ ಮೇಲೆ ನಾವು ಗಮನಕೊಟ್ಟಿದ್ದೇವೆ. ತನಿಖೆ‌ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಚುನಾವಣಾ ಆಯೋಗ ಈ ವಿಷಯವನ್ನು ನೋಡಿಕೊಳ್ಳಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT