ಕೊರಟಗೆರೆ: ಇನ್ನು ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ. ರಾಮದಾಸ್ ಕೂಡಾ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದರೆ ಆಶ್ಚರ್ಯ ಪಡಬೇಕಿಲ್ಲ ಎಂದು ಶಾಸಕ ಡಾ.ಜಿ.ಪರಮೇಶ್ವರ ಹೇಳಿದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಕಾಂಗ್ರೆಸ್‌ಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿರುವುದು ಶುಭ ಸೂಚನೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ಸೂಚನೆ ಇರುವುದರಿಂದ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಇತರೆ ಪಕ್ಷಗಳ ಮುಖಂಡರು ನನ್ನ ಸಂಪರ್ಕದಲ್ಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಅನ್ನು ಮುಳುಗುವ ಹಡಗು ಎಂದು ಹೇಳಿದ್ದಾರೆ. ಯಾರು ಮುಳುಗುತ್ತಾರೆ ಎಂಬುದು ಮೇ.13 ರಂದು ಗೊತ್ತಾಗಲಿದೆ ಎಂದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರಟಗೆರೆ ಕ್ಷೇತ್ರದ ಪ್ರಚಾರದಲ್ಲಿ ಭಾಗವಹಿಸುತ್ತಾರೆ. ಈ ಭಾರಿಯ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.