ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJP ಟಿಕೆಟ್ ಮಿಸ್: ವಿಧಾನ ಪರಿಷತ್‌ ಸ್ಥಾನಕ್ಕೆ ಆರ್‌.ಶಂಕರ್ ರಾಜೀನಾಮೆ ಘೋಷಣೆ 

Last Updated 11 ಏಪ್ರಿಲ್ 2023, 19:13 IST
ಅಕ್ಷರ ಗಾತ್ರ

ಹಾವೇರಿ: ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಆರ್.ಶಂಕರ್‌ ಅವರು, ಟಿಕೆಟ್‌ ಕೈತಪ್ಪಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಜತೆಗೆ, ಬೆಂಬಲಿಗರ ಸಲಹೆಯಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.

2018ರಲ್ಲಿ ಕೆಪಿಜೆಪಿಯಿಂದ ಗೆದ್ದು ಶಾಸಕರಾಗಿದ್ದ ಆರ್‌.ಶಂಕರ್‌ ಅವರು ನಂತರ ಕಾಂಗ್ರೆಸ್ ಪಕ್ಷ ಸೇರಿ ಅರಣ್ಯ ಸಚಿವರಾದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಬೆಂಬಲ ಸೂಚಿಸಿ, ಬಿಜೆಪಿ ಸರ್ಕಾರ ರಚನೆಗೆ ಕಾರಣರಾದರು.

2019ರ ಉಪಚುನಾವಣೆಯಲ್ಲಿ ಆರ್‌.ಶಂಕರ್‌ ಬದಲಾಗಿ ಸ್ಥಳೀಯ ಅಭ್ಯರ್ಥಿ ಅರುಣಕುಮಾರ ಪೂಜಾರ ಅವರಿಗೆ ಬಿಜೆಪಿ ಟಿಕೆಟ್‌ ನೀಡಿ, ಶಂಕರ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲಾಗಿತ್ತು. ಈ ಬಾರಿ ಅವರು ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರು.

ಬಿಜೆಪಿ ಟಿಕೆಟ್‌ ಸಿಗದ ಕಾರಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ಕಾಂಗ್ರೆಸ್‌ ಟಿಕೆಟ್‌ಗೂ ಪ್ರಯತ್ನ ಪಟ್ಟು ನಿರಾಸೆ ಅನುಭವಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT