ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯಲ್ಲೇ ಕುಳಿತು ಟಿ.ವಿ ನೋಡುತ್ತಿರುವ ಶೆಟ್ಟರ್

ಸದ್ಯ 11ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ 35 ಸಾವಿರ ಮತಗಳ‌‌ ಮುನ್ನಡೆ ಸಾಧಿಸಿದ್ದಾರೆ.
Published 13 ಮೇ 2023, 6:54 IST
Last Updated 13 ಮೇ 2023, 6:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ತಮ್ಮ‌‌ ಮನೇಯಲ್ಲೇ ಕುಳಿತು ಟಿ.ವಿ ನೋಡುತ್ತಾ ಮತ ಎಣಿಕೆ‌ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಬೆಳಿಗ್ಗೆಯಿಂದ ಮನೆಯಲ್ಲೇ ಇರುವ ಶೆಟ್ಟರ್ ಮತ ಎಣಿಕೆ‌ ಕೇಂದ್ರಕ್ಕೆ ತೆರಳಿಲ್ಲ.

ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಆಗಿದ್ದ, ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು‌, ಶೆಟ್ಟರ್ ಅವರ ಅಭಿಮಾನಿಗಳು ಅವರ ಮನೆ ಬಳಿ ಸೇರಿದ್ದಾರೆ.

ಸದ್ಯ 11ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ 35 ಸಾವಿರ ಮತಗಳ‌‌ ಮುನ್ನಡೆ ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT