ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Election Results 2023: ಎರಡೂ ಕ್ಷೇತ್ರಗಳಲ್ಲಿ ವಿ. ಸೋಮಣ್ಣಗೆ ಹಿನ್ನಡೆ

Published 13 ಮೇ 2023, 5:00 IST
Last Updated 13 ಮೇ 2023, 5:00 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಬಿಜೆಪಿ ನಾಯಕ ವಿ. ಸೋಮಣ್ಣ ಅವರು ಎರಡೂ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ. ಪುಟ್ಟರಂಗಶೆಟ್ಟಿ ವಿರುದ್ಧವೂ ಸೋಮಣ್ಣ ಭಾರೀ ಅಂತರದ ಹಿನ್ನಡೆ ಅನುಭವಿಸಿದ್ದಾರೆ.‌

ಚಾಮರಾಜನಗರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಅಂತ್ಯದ ವೇಳೆಗೆ ಕಾಂಗ್ರೆಸ್‌ನ ಪುಟ್ಟರಂಗಶೆಟ್ಟಿ 53872 ಮತಗಳನ್ನು ಗಳಿಸಿದರೆ, ಸೋಮಣ್ಣ 41,477 ಮತಗಳನ್ನು ಗಳಿಸಿದ್ದಾರೆ.

ವರುಣಾದಲ್ಲಿ ಫಲಿತಾಂಶದ ಮಾಹಿತಿ ಲಭ್ಯವಾಗದಿದ್ದರೂ, ಅಲ್ಲಿ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT