ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಆಯ್ಕೆ ಕಗ್ಗಂಟು: ದೆಹಲಿಯಲ್ಲಿ ಖರ್ಗೆ–ರಾಹುಲ್ ರಹಸ್ಯ ಸಭೆ

Published 16 ಮೇ 2023, 10:08 IST
Last Updated 16 ಮೇ 2023, 10:08 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಮಖ್ಯಮಂತ್ರಿ ಆಯ್ಕೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ರಹಸ್ಯ ಸಭೆ ನಡೆದಿದ್ದು, ಈ ವೇಳೆ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಕೂಡ ಹಾಜರಿದ್ದರು.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರೂ ಸದ್ಯ ದೆಹಲಿಯಲ್ಲಿದ್ದು, ಉಭಯ ನಾಯಕರ ಜತೆ ಸಭೆ ನಡೆಸಿ ಹೈಕಮಾಂಡ್‌ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಭಿಪ್ರಾಯ ಸಂಗ್ರಹಿಸಿರುವ ವೀಕ್ಷಕರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT