ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ; ಜಿ.ರಘು ಆಚಾರ್ ಆರೋಪ

Published 8 ಮೇ 2023, 7:43 IST
Last Updated 8 ಮೇ 2023, 7:43 IST
ಅಕ್ಷರ ಗಾತ್ರ

ಚಿತ್ರದುರ್ಗ: ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಒತ್ತಾಯಿಸಿದರು.

'ಇದು ಉತ್ತಮ ಬೆಳವಣಿಗೆ ಅಲ್ಲ. ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು' ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

'ಚಿತ್ರದುರ್ಗ ಕ್ಷೇತ್ರದ ರಾಜಕಾರಣ ದಾರಿ ತಪ್ಪುತ್ತಿದೆ. ಅಹಿಂದ ಅಭ್ಯರ್ಥಿ ಎಂಬ ಕಾರಣಕ್ಕೆ ದೌರ್ಜನ್ಯ ಮಾಡುತ್ತಿರುವುದು ಖಂಡನೀಯ. ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ಅವರ ಮೇಲೆ‌ ಅನುಮಾನ ಇಲ್ಲ. ಅವರು ಪ್ರಬುದ್ದ ರಾಜಕಾರಣ ಮಾಡುತ್ತಾರೆ ಎಂಬ ವಿಶ್ವಾಸವಿದೆ. ದಾಳಿ ಯಾರು ಮಾಡಿದ್ದಾರೆ ಎಂಬುದು ಗೊತ್ತಿಲ್ಲ' ಎಂದು ಹೇಳಿದರು.

'ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಅವರ ಬೆಂಬಲಿಗರು ಎದುರಾಳಿ ಅಭ್ಯರ್ಥಿ ಪರ ಪ್ರಚಾರ ಮಾಡುವವರ ಮೇಲೆ‌ ದೌರ್ಜನ್ಯ ಎಸಗಿದ್ದರ ಬಗ್ಗೆ ಈಗಾಗಲೇ ಪ್ರಕರಣ ದಾಖಲಾಗಿದೆ. ವೀರೇಂದ್ರ ಅವರ ಬೆಂಬಲಿಗರೇ ಈ ಕೃತ್ಯ ಮಾಡಿದ್ದಾರೆ ಎಂದು ಹೇಳಲಾರೆ. ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳದೇ ಇದ್ದರೆ ಠಾಣೆಗೆ ದೂರು ನೀಡಲಾಗುವುದು' ಎಂದು ಹೇಳಿದರು.

ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಸತ್ಯವತಿ, ಹಾಸನದ ಮುಸ್ಲಿಂ ಧರ್ಮಗುರು ಜಾಬೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT