ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ ಕ್ಷೇತ್ರಕ್ಕೆ ಹಾಲಿ ಶಾಸಕ ಪರಣ್ಣಗೆ ಬಿಜೆಪಿ ಟಿಕೆಟ್‌

Last Updated 12 ಏಪ್ರಿಲ್ 2023, 18:44 IST
ಅಕ್ಷರ ಗಾತ್ರ

ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ಪರಣ್ಣ ಮನವಳ್ಳಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮೊದಲ ಪಟ್ಟಿಯಲ್ಲಿ ಹೆಸರು ಪ್ರಕಟವಾಗದ ಕಾರಣ ಪರಣ್ಣ ಬುಧವಾರ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಟಿಕೆಟ್‌ ಬಗ್ಗೆ ಚರ್ಚೆ ಮಾಡಿದ್ದರು. 2008ರ ಚುನಾವಣೆಯಲ್ಲಿ ಪರಣ್ಣ 37,121 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.

2013ರಲ್ಲಿ ಸೋಲು ಕಂಡಿದ್ದರು. ಹಿಂದಿನ ಚುನಾವಣೆಯಲ್ಲಿ 67,617 ಮತಗಳನ್ನು ಗಳಿಸಿ ಶಾಸಕರಾಗಿದ್ದರು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಗಂಗಾವತಿಯಿಂದ ಸ್ಪರ್ಧೆ ಮಾಡಲಿರುವ ಕಾರಣ ರಾಜ್ಯದ ಭತ್ತದ ಕಣಜ ರಾಜ್ಯದ ಗಮನ ಸೆಳೆದಿದೆ.

ಮುಂದುವರಿದ ಕೊಪ್ಪಳ ಕ್ಷೇತ್ರದ ಕುತೂಹಲ:

ಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿ ಮತ್ತು ಮುಖಂಡ ಸಿ.ವಿ. ಚಂದ್ರಶೇಖರ್‌ ನಡುವೆ ಟಿಕೆಟ್‌ಗಾಗಿ ಭಾರಿ ಜಿದ್ದಾಜಿದ್ದಿ ನಡೆದಿದೆ. ಇದು ಇಬ್ಬರಿಗೂ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಸಂಸದರು ಟಿಕೆಟ್‌ ನನಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

2018ರ ಚುನಾವಣೆಯಲ್ಲಿ ಚಂದ್ರಶೇಖರ್‌ ಅವರಿಗೆ ಟಿಕೆಟ್‌ ಎಂದು ಘೋಷಣೆ ಮಾಡಿ ಬಳಿಕ ಸಂಸದರ ಪುತ್ರ ಅಮರೇಶ ಕರಡಿಗೆ ಬಿ ಫಾರ್ಮ್ ನೀಡಲಾಗಿತ್ತು. ಆದ್ದರಿಂದ ಕಳೆದ ವರ್ಷದಂತೆ ಈ ವರ್ಷವೂ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕುತೂಹಲ ಹೆಚ್ಚಾಗಿದೆ.

ಟಿಕೆಟ್‌ ಆಕಾಂಕ್ಷಿಗಳಾಗಿರುವ ಇಲ್ಲಿನ ನಾಯಕರು ಮೊದಲ ಪಟ್ಟಿಯಲ್ಲಿಯೇ ನಮ್ಮ ಹೆಸರನ್ನು ಪಕ್ಷ ಘೋಷಣೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಮೊದಲ ಎರಡೂ ಪಟ್ಟಿಗಳಲ್ಲಿಯೂ ಅವರ ಹೆಸರು ಇಲ್ಲ.

ಮೊದಲ ಪಟ್ಟಿಯಲ್ಲಿ ಯಲಬುರ್ಗಾ ಕ್ಷೇತ್ರಕ್ಕೆ ಹಾಲಪ್ಪ ಆಚಾರ್‌, ಕುಷ್ಟಗಿ ಕ್ಷೇತ್ರಕ್ಕೆ ದೊಡ್ಡನಗೌಡ ಎಚ್‌. ಪಾಟೀಲ ಮತ್ತು ಕನಕಗಿರಿ ಕ್ಷೇತ್ರಕ್ಕೆ ಬಸವರಾಜ ದಢೇಸೂಗೂರು ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಜಿಲ್ಲೆಯ ಒಟ್ಟು ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಈಗ ನಾಲ್ಕು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಪ್ರಕಟಿಸಲಾಗಿದೆ. ಕೊಪ್ಪಳ ಕ್ಷೇತ್ರ ಮಾತ್ರ ಬಾಕಿ ಉಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT