ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಚುನಾವಣೆ ಹಿನ್ನೆಲೆ ರೌಡಿಶೀಟರ್ ಮನೆಗಳಲ್ಲಿ ಪೊಲೀಸರ ತಪಾಸಣೆ

Published 8 ಮೇ 2023, 2:52 IST
Last Updated 8 ಮೇ 2023, 2:52 IST
ಅಕ್ಷರ ಗಾತ್ರ

ಮೈಸೂರು: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಗರದ ವಿವಿಧ ಠಾಣೆಗಳ ವ್ಯಾಪ್ತಿಯ ರೌಡಿ ಶೀಟರ್‌ಗಳ ಮನೆಗಳಲ್ಲಿ ಪೊಲೀಸರು ಸೋಮವಾರ ಬೆಳಿಗ್ಗೆ ತಪಾಸಣೆ ನಡೆಸಿದರು.

ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

'ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. 50 ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದೆ. ಮಾರಕಾಸ್ತ್ರ, ಚುನಾವಣೆಗಾಗಿ ಸಂಗ್ರಹಿಸಿದ ಹಣ ಇದೆಯೇ ಎಂಬುದನ್ನು ಪರಿಶೀಲನೆ ನಡೆಸಲಾಗಿದೆ. ಚುನಾವಣೆಯ ವೇಳೆ ಶಾಂತಿ ಭಂಗ ಉಂಟು ಮಾಡದಂತೆ ಎಚ್ಚರಿಕೆ ನೀಡಲಾಗಿದೆ' ಎಂದು ಡಿಸಿಪಿ ಮುತ್ತುರಾಜ್ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT