ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಚುನಾವಣೆ 2023: 406 ನಾಮಪತ್ರ ತಿರಸ್ಕೃತ

Published 22 ಏಪ್ರಿಲ್ 2023, 4:36 IST
Last Updated 22 ಏಪ್ರಿಲ್ 2023, 4:36 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 220 ಕ್ಷೇತ್ರಗಳಲ್ಲಿ ನಾಮಪತ್ರಗಳ ಪರಿಶೀಲನೆ ಮುಗಿದಿದ್ದು, 3,044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿವೆ. 406 ನಾಮಪತ್ರಗಳು ತಿರಸ್ಕೃತಗೊಂಡಿವೆ.

ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯ ದಿನವಾಗಿತ್ತು. 3,632 ಮಂದಿ 5,102 ನಾಮಪತ್ರಗಳನ್ನು ಸಲ್ಲಿಸಿದ್ದರು. ಶುಕ್ರವಾರ ಪರಿಶೀಲನೆ ನಡೆಯಿತು.

‘ಕೆಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಸಂಬಂಧಿಸಿ ತಕರಾರು ಸಲ್ಲಿಕೆಯಾಗಿರುವುದರಿಂದ ಸವದತ್ತಿ– ಯಲ್ಲಮ್ಮ, ಔರಾದ್‌, ಹಾವೇರಿ ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

220 ಕ್ಷೇತ್ರಗಳಲ್ಲಿ ಪುರುಷರಿಂದ 4,607, ಮಹಿಳೆಯರಿಂದ 381 ಮತ್ತು ಲೈಂಗಿಕ ಅಲ್ಪಸಂಖ್ಯಾತರಿಂದ ಒಂದು ನಾಮಪತ್ರ ಸಲ್ಲಿಕೆಯಾಗಿದ್ದವು. 

ಬಿಜೆಪಿಯ 219, ಕಾಂಗ್ರೆಸ್‌ನ 218, ಜೆಡಿಎಸ್‌ ಮತ್ತು ಆಮ್‌ ಆದ್ಮಿ ಪಕ್ಷದ ತಲಾ 207, ಬಹುಜನ ಸಮಾಜ ಪಕ್ಷದ 135, ಸಿಪಿಎಂನ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕೃತವಾಗಿವೆ. 

ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಿ.ಝಡ್‌.ಜಮೀರ್‌ ಅಹಮ್ಮದ್ ಖಾನ್‌, ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್‌.ಆರ್‌.ವಿಶ್ವನಾಥ್‌, ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್‌ನ ಟಿ.ಎನ್‌.ಜವರಾಯಿ ಗೌಡ ಸೇರಿದಂತೆ ಹಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಪ್ರತಿಸ್ಪರ್ಧಿಗಳು ತಕರಾರು ಸಲ್ಲಿಸಿದ್ದರು. ಬಹುತೇಕ ಕಡೆ ವಿಚಾರಣೆ ನಡೆಸಿ, ತಕರಾರು ವಜಾಗೊಳಿಸಿದ ಬಳಿಕ ನಾಮಪತ್ರಗಳನ್ನು ಅಂಗೀಕರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT