ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಯಾವುದೇ ಬಂಡೆ ಗ್ರಾನೈಟ್ ಲೂಟಿ ಮಾಡಿ ಹಣ ಸಂಪಾದಿಸಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Published 30 ಏಪ್ರಿಲ್ 2023, 15:26 IST
Last Updated 30 ಏಪ್ರಿಲ್ 2023, 15:26 IST
ಅಕ್ಷರ ಗಾತ್ರ

ಹಾರೋಹಳ್ಳಿ :ನಾನು ಯಾವುದೇ ಬಂಡೆ ಗ್ರಾನೈಟ್ ಲೂಟಿ ಮಾಡಿ ಹಣ ಸಂಪಾದಿಸಿಲ್ಲ ನಾನು ಸಂಪಾದಿಸಿರುವುದು ಜಿಲ್ಲೆಯ ಜನತೆಯ ಪ್ರೀತಿ ಮಾತ್ರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಹಾರೋಹಳ್ಳಿಯ ಪಟ್ಟಣದ ಬಸ್ ನಿಲ್ದಾಣದ ವೃತ್ತ ಹಾಗೂ ಮರಳವಾಡಿಯ ಬಸ್ ನಿಲ್ದಾಣದ ವೃತ್ತದಲ್ಲಿ ರಾಮನಗರ ವಿಧಾನಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರ ಪರವಾಗಿ ಮತಯಾಚನೆ ನಡೆಸಿ ಮಾತನಾಡಿ ನಾನು ಮಣ್ಣಲ್ಲಿ ಮಣ್ಣಾಗುವವರೆಗೂ ರಾಮನಗರ ಜಿಲ್ಲೆಯ ಜನತೆಯ ಪ್ರೀತಿ ಅಭಿಮಾನವನ್ನು ಮರೆಯುವುದಿಲ್ಲ ನನ್ನನ್ನು ಸಾಕಿ ಬೆಳೆಸಿದ ಕಾರ್ಯಕರ್ತರೇ ನನ್ನ ಆಸ್ತಿ ಜಿಲ್ಲೆಯ ಜನತೆ ನನ್ನನ್ನ ಪ್ರೀತಿ ವಿಶ್ವಾಸದಿಂದ ಕಾಣ್ತಾ ಇದ್ದಾರೆ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾವೆಂದು ಚಿರಋಣಿ, ನಿಮ್ಮ ಆಶೀರ್ವಾದ, ಪ್ರೀತಿಯಿಂದ ರಾಜಕೀಯವಾಗಿ ನಮ್ಮ ಕುಟುಂಬ ಎತ್ತರಕ್ಕೆ ಬೆಳೆದಿದೆ ಕಾರ್ಯಕರ್ತರು, ಮತದಾರರ ಜೊತೆಗೆ ನಾನು ನಿಲ್ಲುತ್ತೇನೆ. ಜನರ ಕಷ್ಟ ಸುಖಗಳಿಗೆ ಎಂದಿಗೂ ಜೊತೆಗೆ ನಿಲ್ತೇನೆ ಈ ಬಾರಿ ಜಾತ್ಯಾತೀತ ಜನತಾದಳ ಅಧಿಕಾರಕ್ಕೆ ಬರುವುದು ಖಚಿತ ಯಾರೂ ಏನೇ ಅಪಪ್ರಚಾರ ನಡೆಸಿದರೂ ಅದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದರು.

ದೇವೇಗೌಡರು ಮತ್ತು ನನಗೆ ಪ್ರೀತಿ ವಿಶ್ವಾಸದಿಂದ ಕಂಡಿದ್ದೀರಿ ಅದೇ ರೀತಿಯ ಪ್ರೀತಿ ಅಭಿಮಾನವನ್ನು ನಿಖಿಲ್ ಕುಮಾರಸ್ವಾಮಿ ಮೇಲೆ ಇಟ್ಡಿದ್ದೀರಿ ನಮ್ಮನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನತೆ ಅದರಲ್ಲೂ ಹಾರೋಹಳ್ಳಿ, ಮರಳವಾಡಿ ಜನರು ಶಕ್ತಿ ನೀಡಿದ್ದೀರಿ ನಾವಿಂದು ಹೆಮ್ಮರವಾಗಿ ಬೆಳೆದು ಹಲವರಿಗೆ ನೆರಳಾಗಿದ್ದೇವೆ ಎಂದರೆ ಅದಕ್ಕೆ ಜಿಲ್ಲೆಯ ಜನತೆಯೇ ಕಾರಣ. ನೀವು ನನ್ನನ್ನ ಮನೆ ಮಗನಂತೆ ಕಂಡಿದ್ದೀರಿ. ನೀವು ಕೊಟ್ಟ ಶಕ್ತಿಯಿಂದ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲು ಸಾಧ್ಯವಾಗಿದೆ ಎಂದರು.

ವಿರೋಧ ಪಕ್ಷಗಳಲ್ಲಿ ನಡುಕ; ಇನ್ನು ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ದೊರೆತ ಬೆಂಬಲ ಕಂಡು ವಿಪಕ್ಷಗಳ ವಿಚಲಿತವಾಗಿದೆ ಉತ್ತರ ಭಾರತದಿಂದ ಪ್ರಧಾನಿ ಸೇರಿದಂತೆ ಹಲವು ನಾಯಕರುಗಳು ದಂಡೆತ್ತಿ ಬರುತ್ತಿದ್ದಾರೆ. ಯಾರೇ ಬಂದರೂ ಸಹ ರಾಜ್ಯದ ಜನತೆ ನಮಗೆ ಬಹುಮತ ನೀಡುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಬಿಜೆಪಿಯವರು ಮಾಜಿ ಪ್ರಧಾನಿ ದೇವೇಗೌಡರು ನೀಡಿದ್ದ ಅಲ್ಪಸಂಖ್ಯಾತ ಮೀಸಲಾತಿ ರದ್ದುಮಾಡಿದ್ದಾರೆ ಅದಕ್ಕೆಲ್ಲಾ ೧೦ದಿನಗಳ ನಂತರ ಉತ್ತರ ನೀಡಲಾಗುವುದು ನಮ್ಮ ಸರಕಾರದಲ್ಲಿ ಎಲ್ಲಾ ವರ್ಗಗಳಿಗೂ ನ್ಯಾಯ ಕೊಡಿಸಲಾಗುವುದು. ರೈತರು, ಯುವಕರು ಸೇರಿದಂತೆ ಮಹಿಳೆಯರು ಸ್ವಾಭಿಮಾನದಿಂದ ಬದುಕು ನಡೆಸಲು ಯೋಜನೆ ರೂಪಿಸಲಾಗುವುದು. ಕಳೆದ ಬಾರಿ ಅಪಪ್ರಚಾರ ನಡೆಸಿ ನನ್ನ ವಿರುಧ್ಧ ಷಡ್ಯಂತ್ರ ಹೂಡಲಾಗಿತ್ತು. ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬರಲಿದೆ ಹಾಲಿಗೆ ಪ್ರೋತ್ಸಾಹ ಧನ ನೀಡುವ ಜೊತೆಗೆ ಪಶು ಆಹಾರವನ್ನು ನೀಡಲಾಗುತ್ತದೆ. ಇನ್ನು ನಿಖಿಲ್ ಕುಮಾರಸ್ವಾಮಿಯವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ ಹಲವು ಯುವಕರ ಒತ್ತಾಯದ ಮೇರೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗಿಳಿದಿದ್ದಾರೆ ಮಂಡ್ಯದಲ್ಲಾದ ರೀತಿ ಇಲ್ಲಾಗುವುದಿಲ್ಲ ಜನರು ಹಾಲನ್ನಾದರೂ ನೀಡಿ,ನೀರನ್ನಾದರೂ ಇನ್ನೇನಾದರೂ ನೀಡಿದರೂ ಅದನ್ನು ಸ್ವೀಕರಿಸಲಾಗುವುದು. ನೆ. ನಿಮ್ಮ ಮಡಿಲಿಗೆ ನನ್ನ ಮಗನನ್ನು ಹಾಕಿದ್ದೇನೆ ನೀವೇ ಸಾಕಿ ಸಲುಹಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಇದೇ ವೇಳೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ.ಎನ್ ನಾಗರಾಜು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೊಂಡರು. ಶಾಸಕಿ ಅನಿತಾ ಕುಮಾರಸ್ವಾಮಿ,ಸಮಾಜ ಸೇವಕ ಅನಿಲ್ ಕುಮಾರ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಾಮಕೃಷ್ಣ,ಹಾರೋಹಳ್ಳಿಯ ಪುರೊಷೋತ್ತಮ್,ಅನಂತು,ಮೇಡಮಾರನಹಳ್ಳಿ ಕುಮಾರ್,ರಾಮು ಲಕ್ಷö್ಮಣ್,ಮಲ್ಲಯ್ಯ,ಪ್ರವೀಣ್,ನಾಗೇಶ್,ಮಹದೇವ್ ಸೇರಿದಂತೆ ಹಾರೋಹಳ್ಳಿ,ಮರಳವಾಡಿ ಹೋಬಳಿಯ ಕಾರ್ಯಕರ್ತರು ಹಾಜರಿದ್ದರು.

ಹಾರೋಹಳ್ಳಿ ಜೆಡಿಎಸ್ ಪಕ್ಷದ ಬಹಿರಂಗ ರ್ಯಾಲಿಯಲ್ಲಿ ಭಾಗವಹಿಸಿದ ಜನಸ್ತೋಮ
ಹಾರೋಹಳ್ಳಿ ಜೆಡಿಎಸ್ ಪಕ್ಷದ ಬಹಿರಂಗ ರ್ಯಾಲಿಯಲ್ಲಿ ಭಾಗವಹಿಸಿದ ಜನಸ್ತೋಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT