ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳು ನಾಡಗೀತೆ ನಿಲ್ಲಿಸಿ ಕನ್ನಡ ನಾಡಗೀತೆ ಹಾಕಿಸಿದ ಶಾಸಕ ಕೆ.ಎಸ್.ಈಶ್ವರಪ್ಪ

Published 27 ಏಪ್ರಿಲ್ 2023, 7:29 IST
Last Updated 27 ಏಪ್ರಿಲ್ 2023, 7:29 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಎನ್ ಇಎಸ್ ಮೈದಾನದಲ್ಲಿ ಗುರುವಾರ ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆಯನ್ನು ಅರ್ಧಕ್ಕೆ ತಡೆದ ಶಾಸಕ ಕೆ.ಎಸ್.ಈಶ್ವರಪ್ಪ ಕರ್ನಾಟಕದ ನಾಡಗೀತೆ ಹಾಕಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯೂ ಆದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರೊಂದಿಗೆ, ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ (ಚನ್ನಿ) ಕೂಡ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸಮಾವೇಶ ಆರಂಭವಾಗುತ್ತಿದ್ದಂತೆಯೇ ಸಂಘಟಕರು ಈಗ ತಮಿಳು ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಗಣ್ಯರು ಎದ್ದು ನಿಂತರು.

ಧ್ವನಿವರ್ಧಕದಲ್ಲಿ ತಮಿಳುನಾಡು ನಾಡಗೀತೆ ಆರಂಭವಾಗುತ್ತಿದ್ದಂತೆಯೇ ಆಸನದ ಬಳಿಯಿಂದ ಡಯಾಸ್ ನತ್ತ ಬಂದ ಈಶ್ವರಪ್ಪ, ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚಿಸಿದರು. ಕರ್ನಾಟಕದ ನಾಡಗೀತೆ ಹಾಕಿಸಿದರು. ನಂತರ ವೇದಿಕೆಯಲ್ಲಿದ್ದ ಗಣ್ಯರು ಕನ್ನಡದ ನಾಡಗೀತೆಗೆ ಗೌರವ ಸಲ್ಲಿಸಿದರು.

ಕ್ಯಾಸೆಟ್ ನಲ್ಲಿ ತಮಿಳು ನಾಡಗೀತೆ ಹಾಕುವುದು ಬೇಡ. ಬೇಕಿದ್ದರೆ ಇಲ್ಲಿರುವ ಯಾರಾದರೂ ತಮಿಳು ಹೆಣ್ಣುಮಕ್ಕಳು ಬಂದು ಹಾಡಲಿ ರಂದು ಈಶ್ವರಪ್ಪ ಹೇಳಿದರೂ ಯಾರೂ ಮುಂದೆ ಬರಲಿಲ್ಲ. ನಂತರ ಕ್ಯಾಸೆಟ್ ಮೂಲಕ ಕನ್ನಡ ನಾಡಗೀತೆ ಬಿತ್ತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT