ಮೈಸೂರು: ‘ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ಗಳನ್ನು ಕರೆಸಿಕೊಂಡಿದ್ದಾರೆ. ಒಂದೇ ದಿನ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ಅವರು ಈಗ ಮತ್ತೆ ಮತ್ತೆ ಬರುತ್ತಿದ್ದಾರೆ’ ಎಂದು ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಟೀಕಿಸಿದರು.

ವರುಣ ಕ್ಷೇತ್ರದ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದಲ್ಲಿ ಗುರುವಾರ ಮತ ಯಾಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ವರ ನಟ ರಾಜಕುಮಾರ್ ಕುಟುಂಬಕ್ಕೂ ನನಗೂ 40 ವರ್ಷದ ಅವಿನಾಭಾವ ಸಂಬಂಧವಿದೆ. ಚಲನಚಿತ್ರ ನಟ ದಿವಂಗತ ಪುನೀತ್ ರಾಜಕುಮಾರ್ ಹೆಸರಿನಲ್ಲಿ ನಮ್ಮ ಕ್ಷೇತ್ರದಲ್ಲಿ ದೊಡ್ಡದಾಗಿ ಆಸ್ಪತ್ರೆ ಕಟ್ಟಿಸಿದ್ದೇನೆ. ನನಗೆ ದುನಿಯಾ ವಿಜಿ, ರಮ್ಯಾ ಬಗ್ಗೆ ಗೊತ್ತಿಲ್ಲ. ಆದರೆ, ಶಿವರಾಜ್ಕುಮಾರ್ ಯಾಕೆ ಹೀಗೆ ಮಾಡಿದರೋ ಗೊತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸಿದ್ದರಾಮಯ್ಯ ಅವರು ಸ್ಟಾರ್ ಪ್ರಚಾರಕರ ಜೊತೆ ಬಂದು ಸೋಮಣ್ಣ ವಿರುದ್ಧ ಪ್ರಚಾರ ಮಾಡುತ್ತಿದ್ದಾರಲ್ಲಾ ಅದೇ ನನಗೆ ಖುಷಿ. ಜನ ಸೇರಿಸಲು ಸ್ಟಾರ್ಗಳ ಜೊತೆಗೆ ಬರುತ್ತಿದ್ದಾರಷ್ಟೆ’ ಎಂದು ವ್ಯಂಗ್ಯವಾಡಿದರು.

ತಮ್ಮಿಂದ ಮಾತ್ರವೇ ವರುಣ ಕ್ಷೇತ್ರದ ಅಭಿವೃದ್ಧಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು. ‘ತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕಾಗುತ್ತದೆ ಎಂಬಂತೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಅವರು ಮನಸ್ಸು ಮಾಡಿದ್ದರೆ ಇಷ್ಟು ವರ್ಷಗಳಲ್ಲಿ ವರುಣ ಕ್ಷೇತ್ರವನ್ನು ಮಾದರಿಯಾಗಿಸಬಹುದಿತ್ತು. ವರುಣದಲ್ಲಿ ಒಂದು ಕಾಲೇಜಿಲ್ಲ, ಆಸ್ಪತ್ರೆ ಇಲ್ಲ, ರಸ್ತೆಗಳು ಸರಿ ಇಲ್ಲ. ಬಾದಾಮಿಯಲ್ಲೂ ಸಿದ್ದರಾಮಯ್ಯ ಯಾವ ಅಭಿವೃದ್ಧಿ ಕಾರ್ಯವನ್ನೂ ಮಾಡಿಲ್ಲ. ಜನರ ಋಣ ತೀರಿಸುವುದಕ್ಕೂ ಬದ್ಧತೆ ಬೇಕು. ನಾನು ಆ ಕೆಲಸವನ್ನು ಗೋವಿಂದರಾಜನಗರದಲ್ಲಿ ಮಾಡಿದ್ದೇನೆ. ನಾನು ನಾನು ಎಂಬುದನ್ನು ಸಿದ್ದರಾಮಯ್ಯ ಮೊದಲು ಬಿಡಲಿ’ ಎಂದು ಹೇಳಿದರು.

‘ವರುಣ ಜನರು ನನ್ನ ಗೆಲ್ಲಿಸಿದರೆ ನಾನು ವರುಣದಲ್ಲೇ ಇರುತ್ತೇನೆ. ಇಲ್ಲೇ ಮನೆಯನ್ನೂ ಮಾಡುತ್ತೇನೆ’ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.