ವಿಜಯಪುರ(ದೇವನಹಳ್ಳಿ): ‘ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ವರ್ಷಗಳಿಂದ ನಿರಂತರವಾಗಿ ಪಕ್ಷ ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ಆದ್ದರಿಂದ ಈ ಬಾರಿ ನನಗೆ ಅವಕಾಶ ಮಾಡಿಕೊಡುವಂತೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರಲ್ಲಿ ಮನವಿ ಮಾಡುತ್ತೇನೆ. ಪಕ್ಷದ ಹಿರಿಯ ನಾಯಕರಲ್ಲೂ ಮನವಿ ಮಾಡಿದ್ದೇನೆ. ಕ್ಷೇತ್ರದ ಬಹುತೇಕ ಕಾರ್ಯಕರ್ತರ ಒತ್ತಾಯವೂ ಆಗಿದೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋತಿದ್ದಾರೆ. ಈ ಬಾರಿ ಶತಾಯ ಗತಾಯ ಪಕ್ಷವನ್ನು ಗೆಲ್ಲಿಸಬೇಕು ಎಂದು ನಾಲ್ಕು ವರ್ಷಗಳಿಂದ ನಿರಂತರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷದ ಕಾರ್ಯಕರ್ತರು, ಮುಖಂಡರೊಟ್ಟಿಗೆ ನಿಕಟ ಸಂಪರ್ಕ ಇಟ್ಟುಕೊಂಡು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಿದ್ದೇನೆ’ ಎಂದು
ತಿಳಿಸಿದರು.

‘ದೇವನಹಳ್ಳಿಯಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಕುರಿತು ಎರಡು ವರ್ಷಗಳ ಹಿಂದೆ ಪಕ್ಷದ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ ಅವರೊಂದಿಗೂ ಚರ್ಚೆ ನಡೆಸಿದ್ದೇನೆ. ಅವರೂ ಕೂಡಾ ಪ್ರೋತ್ಸಾಹಿಸಿದ್ದರು. ರಾಜ್ಯದ ನಾಯಕರೂ ಬೆಂಬಲಿಸಿದ್ದರು. ಆದರೆ, ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪಕ್ಷದ ಹೈಕಮಾಂಡ್ ಕೆ.ಎಚ್.ಮುನಿಯಪ್ಪ ಅವರ ಹೆಸರು ಘೋಷಿಸಿದೆ’ ಎಂದು ಬೇಸರಿಸಿದರು.

‘ಮುನಿಯಪ್ಪ ಅವರು ಯಾವುದೇ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುವಂತಹ ಸಾಮರ್ಥ್ಯವುಳ್ಳವರು. ಸಾಕಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶಗಳಿವೆ. ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಂಡು, ಈ ಕ್ಷೇತ್ರವನ್ನು ಬಿಟ್ಟುಕೊಡುವಂತೆ, ಅವರಲ್ಲಿ ಮನವಿ ಮಾಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.