ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Published 18 ಮೇ 2024, 11:47 IST
Last Updated 18 ಮೇ 2024, 11:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಕಾನೂನು ಸುವ್ಯವಸ್ಥೆ ವಿಚಾರ ಪ್ರಸ್ತಾಪಿಸಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ‘ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ’ ಎಂದು ಬರೆದುಕೊಂಡಿದೆ.

‘ಅಪರಾಧಿಗಳಿಗೆ ಶ್ರೀರಕ್ಷೆ -ಅಮಾಯಕರಿಗೆ ಶಿಕ್ಷೆ . ಇದೇ ಕಾಂಗ್ರೆಸ್‌ ಸರ್ಕಾರದ ಆಡಳಿತ ಧ್ಯೇಯ. ರಕ್ತ ಸಿಕ್ತ ‘ಕೈ’ನಿಂದ (ಕಾಂಗ್ರೆಸ್) ಕರ್ನಾಟಕದ ಕಾನೂನು ಸುವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಅಪರಾಧ ಕೃತ್ಯಗಳು ಜರುಗಿವೆ’ ಎಂದು ಬಿಜೆಪಿ ಕಿಡಿಕಾರಿದೆ.

‘ಇದೇ ಆ ದಿನಗಳ ಗೂಂಡಾ ರಾಜ್ಯ! ಕೊಲೆ, ಸುಲಿಗೆ, ಅತ್ಯಾಚಾರ, ಗೂಂಡಾಗಿರಿ, ಭಯೋತ್ಪಾದನೆಯ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ಯಾವುದೇ ಅಡೆತಡೆಗಳು ಇಲ್ಲದೆ ಜಾರಿ ಮಾಡಿದೆ. ಪರಿಣಾಮ ಕಳೆದ 4 ತಿಂಗಳಲ್ಲೇ 430 ಕೊಲೆಗಳು ನಡೆದಿವೆ. ಇನ್ನೂ ಸುಲಿಗೆ, ಅತ್ಯಾಚಾರ, ಪೋಕ್ಸೊ, ಗಲಭೆ ಇತ್ಯಾದಿಗಳ ಲೆಕ್ಕವೇ ಬೇರೆ‌’ ಎಂದು ‘ಪ್ರಜಾವಾಣಿ’ಯ ಲೇಖನವನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ಬಿಜೆಪಿ ಗುಡುಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT