ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಆಯ್ಕೆ ಅಂತಿಮವಾಗಿಲ್ಲ, ಖರ್ಗೆ ನೇತೃತ್ವದಲ್ಲಿ ಚರ್ಚೆ ನಡೆಯುತ್ತಿದೆ: ಸುರ್ಜೇವಾಲಾ

Published 17 ಮೇ 2023, 9:55 IST
Last Updated 17 ಮೇ 2023, 9:55 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಎಂ ಆಯ್ಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಹೊಸ ಸಿಎಂ ಆಯ್ಕೆ ಮಾಡುವುದರ ಜತೆ ಹೊಸ ಸಚಿವ ಸಂಪುಟ ರಚನೆಯಾಗಲಿದೆ’ ಎಂದು ತಿಳಿಸಿದರು.

ಸಿಎಂ ಆಯ್ಕೆ ವಿಚಾರವಾಗಿ ಕೆಲವರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಕಾರ್ಯಕರ್ತರು ಎಚ್ಚರವಹಿಸಬೇಕು. ಚರ್ಚೆ ಬಳಿಕ ಒಮ್ಮತದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರ್ಜೇವಾಲಾ ಹೇಳಿದರು.

ಕರ್ನಾಟಕ ಮಖ್ಯಮಂತ್ರಿ ಆಯ್ಕೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರೂ ಸದ್ಯ ದೆಹಲಿಯಲ್ಲಿದ್ದು, ಉಭಯ ನಾಯಕರ ಜತೆ ಸಭೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT