ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸುತ್ತೇವೆ: ಮುನಿಯಪ್ಪ

Published 26 ಮಾರ್ಚ್ 2024, 15:26 IST
Last Updated 26 ಮಾರ್ಚ್ 2024, 15:26 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್‌ ಅನ್ನು ಯಾರಿಗೇ ಕೊಟ್ಟರೂ ಗೆಲ್ಲಿಸಿಕೊಂಡು ಬರುವುದಾಗಿ ಹೈಕಮಾಂಡ್‍ಗೆ ಭರವಸೆ ನೀಡಿದ್ದೇವೆ. ಅದಕ್ಕೆ ಬದ್ಧರಾಗಿದ್ದೇವೆ’ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಏಳು ಬಾರಿ ನಾನು ಗೆಲುವು ಸಾಧಿಸಿದ್ದೆ. ಅಲ್ಲಿ ಈ ಬಾರಿ ಬಿ.ಎಸ್. ಸುರೇಶ್ ಜಿಲ್ಲಾ ಉಸ್ತುವಾರಿ ಸಚಿವ. ಕಾಂಗ್ರೆಸ್‍ನ ಭದ್ರಕೋಟೆಯಾಗಿರುವ ಚಿಕ್ಕಬಳ್ಳಾಪುರದಲ್ಲಿ ಡಾ.ಎಂ.ಸಿ. ಸುಧಾಕರ್‌ಗೆ ಉಸ್ತುವಾರಿ ಇದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾನು ಉಸ್ತುವಾರಿ ಸಚಿವ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಈ ಎರಡೂ ಕ್ಷೇತ್ರಗಳಲ್ಲಿ ಯಾರನ್ನೇ ಅಭ್ಯರ್ಥಿ ಮಾಡಿದರೂ ಗೆಲ್ಲಿಸುವ ವಾಗ್ದಾನವನ್ನು ವರಿಷ್ಠರಿಗೆ ನೀಡಿದ್ದೇವೆ’ ಎಂದರು.

‘ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಸಚಿವರಾದ ನಮ್ಮ ಜವಾಬ್ದಾರಿಯಾಗಿದೆ. ಇತ್ತೀಚೆಗೆ ನಡೆದ ಪಕ್ಷದ ವರಿಷ್ಠರ ಸಭೆಯಲ್ಲಿ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಅಭ್ಯರ್ಥಿ ಆಯ್ಕೆ ಹೊಣೆಯನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ಬಿಡಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ’ ಎಂದರು.

‘ರಾಜ್ಯದಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತೇವೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಆದ್ಯತೆಯಲ್ಲಿ ಶ್ರಮಿಸುತ್ತೇನೆ. ರಾಜ್ಯದಲ್ಲಿರುವ ಐದು ಮೀಸಲು ಲೋಕಸಭಾ ಕ್ಷೇತ್ರಗಳ ಪೈಕಿ ತಲಾ 2 ಕ್ಷೇತ್ರಗಳನ್ನು ಬಲಗೈ ಮತ್ತು ಎಡಗೈ ಸಮುದಾಯಕ್ಕೆ ಹಂಚಿ, ಒಂದು ಸ್ಥಾನವನ್ನು ಬೋವಿ ಅಥವಾ ಲಂಬಾಣಿಗೆ ನೀಡುವುದು ಸಂಪ್ರದಾಯ. ಎರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT