ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದವರು ಈಗ ಮನೆಗೆ: ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕೆ

Published 27 ಮಾರ್ಚ್ 2024, 6:02 IST
Last Updated 27 ಮಾರ್ಚ್ 2024, 6:02 IST
ಅಕ್ಷರ ಗಾತ್ರ

ಗೋಕರ್ಣ: ಬಿಜೆಪಿಯಲ್ಲಿ ಈಗ ಸಿದ್ದಾಂತಕ್ಕೆ ಬೆಲೆಯಿಲ್ಲ. ಪಕ್ಷ ಕಟ್ಟಿ, ಬೆಳೆಸಿ, ಪಕ್ಷಕ್ಕಾಗಿ ದುಡಿದವರು ಈಗ ಮನೆಯಲ್ಲಿದ್ದಾರೆ. ಪಕ್ಷಕ್ಕೆ ಅವರು ಬೇಕಾಗಿಲ್ಲ. ಸಿದ್ದಾಂತ ಇಲ್ಲದ ಹೊರಗಿನಿಂದ ಬಂದವರೇ ಈಗ ಬಿಜೆಪಿಯಲ್ಲಿ ಆಳುವವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಮಾಸ್ ಲೀಡರ್ ಅನ್ನೇ ಇಂದು ಮನೆಗೆ ಕಳುಹಿಸಿದ್ದಾರೆ ಎಂದು ಅನಂತಕುಮಾರ ಹೆಗಡೆ ಹೆಸರು ಹೇಳದೆ ಬಿಜೆಪಿಯನ್ನು ಟೀಕಿಸಿದರು.

ಬುಧವಾರ ಗೋಕರ್ಣದ ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು.

ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿ, ನಮ್ಮ ಆತ್ಮಸ್ಥೈರ್ಯ ಹೆಚ್ಚಾಗಿದೆ. ಸರ್ಕಾರದ ಗ್ಯಾರಂಟಿ ಅನುಷ್ಠಾನಕ್ಕೆ ದೇವರು ನಮಗೆ ಹೆಚ್ಚಿನ ಶಕ್ತಿ ಕೊಡುತ್ತಾನೆ ಎಂದರು.

ಕರ್ನಾಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ. ಎಲ್ಲಾ ಕಡೆ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿಯೂ ಕಾಂಗ್ರೆಸ್ ವಾತಾವರಣವಿದೆ. ಅದೇ ಕಾರಣದಿಂದ ಈಗ ಮೋದಿ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಸಿದ್ದಾಂತ ನಂಬಿ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎನ್ನುವ ಮೂಲಕ ಪರೋಕ್ಷವಾಗಿ ಶಿವರಾಮ ಹೆಬ್ಬಾರ ಕಾಂಗ್ರೆಸ್ಸಿಗೆ ಬಂದರೆ ಪಕ್ಷ ಅವರನ್ನು ಸೇರಿಸಿಕೊಳ್ಳಲಿದೆ. ಯಾರು ವಿರೋಧ ಮಾಡಿದರೂ ಪಕ್ಷದ ತೀರ್ಮಾನವೇ ಅಂತಿಮ ಎಂದರು.

ಜೆಡಿಎಸ್ ಪಕ್ಷ ಇಂದು ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ. ಕೋಮುವಾದಿಗಳೊಂದಿಗೆ ಕೈಜೋಡಿಸಿದ ಜೆಡಿಎಸ್ ಅಪ್ಪ ಮಕ್ಕಳ ಪಕ್ಷವಾಗಿದೆ. ಅವರ ಬಗ್ಗೆ ಮಾತನಾಡುವುದು ವ್ಯರ್ಥ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಪ್ರಮುಖರಾದ ಹೊನ್ನಪ್ಪ ನಾಯಕ, ನಿವೇದಿತ್ ಆಳ್ವ, ಶ್ರೀಧರ ಭಾಗವತ್, ನಾಗರಾಜ ಹಿತ್ತಲಮಕ್ಕಿ ಇದ್ದರು.

ಗೋಕರ್ಣದಲ್ಲಿ ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಶಿವಕುಮಾರ್

ಗೋಕರ್ಣದಲ್ಲಿ ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಶಿವಕುಮಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT