ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯ ಹೆಸರು ಹೇಳಲಿ: ದೇವೇಗೌಡ ಸವಾಲು

Published 22 ಏಪ್ರಿಲ್ 2024, 22:40 IST
Last Updated 22 ಏಪ್ರಿಲ್ 2024, 22:40 IST
ಅಕ್ಷರ ಗಾತ್ರ

ಬೀರೂರು (ಚಿಕ್ಕಮಗಳೂರು): ‘ಇಂಡಿಯಾ ಒಕ್ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೆಸರು ಹೇಳಲಿ, ನಾನು ತಲೆಬಾಗುತ್ತೇನೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸವಾಲು ಹಾಕಿದರು.

ಬೀರೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಸಭೆಯಲ್ಲಿ ಮಾತಾಡಿದ ಅವರು, ‘ಕಾಂಗ್ರೆಸ್‌ಗೆ ಮತ ಹಾಕಬಾರದು ಎಂದು ಮಮತಾ ಬ್ಯಾನರ್ಜಿ ಹೇಳುತ್ತಿದ್ದಾರೆ. ನರೇಂದ್ರ ಮೋದಿ ವಿಶ್ವದ ನಾಯಕರಾಗಿ ಬೆಳೆದಿದ್ದಾರೆ. ಅವರ ಎದುರು ಪ್ರಧಾನಿ ಅಭ್ಯರ್ಥಿಯಾಗಲು ಲಾಯಕ್ಕಾದ ಒಬ್ಬ ನಾಯಕರಿದ್ದಾರೆ ಎಂಬುದುನ್ನು ಈ ರಾಜ್ಯದ ಮುಖ್ಯಮಂತ್ರಿ ಹೇಳಲಿ’ ಎಂದರು.

‘ರಾಜ್ಯದಲ್ಲಿ ಇಷ್ಟೊಂದು ಕೆಟ್ಟ ಮತ್ತು ಭ್ರಷ್ಟ ಸರ್ಕಾರವನ್ನು ನಾನು 62 ವರ್ಷಗಳ ರಾಜಕಾರಣದಲ್ಲಿ ನೋಡಿಲ್ಲ. ಈ ಚುನಾವಣೆ ಮುಗಿದ ನಂತರ ಇದನ್ನು ಅಂತ್ಯ ಮಾಡಬೇಕು ಎಂಬುದು ನಮ್ಮಿಬ್ಬರ ಗುರಿ ಇದೆ. ಇಲ್ಲಿನ ಸಂಪತ್ತನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸುತ್ತಿದ್ದಾರೆ. ಜನ ಅರ್ಥ ಮಾಡಿಕೊಂಡು ಮತ ಹಾಕಬೇಕು’ ಎಂದು ಹೇಳಿದರು.

‘ನಾನು ಮತ್ತು ಬಿ.ಎಸ್.ಯಡಿಯೂರಪ್ಪ ಒಂದಾಗಿದ್ದೇವೆ. ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಬೇಕು ಎಂಬ ಹುಚ್ಚು ನಮಗಿದೆ. ಈ ದೇಶವನ್ನು ಉಳಿಸುವ ಒಬ್ಬರೇ ಒಬ್ಬ ವ್ಯಕ್ತಿ ಎಂದರೆ ನರೇಂದ್ರ ಮೋದಿ. ಯಡಿಯೂರಪ್ಪ ಅವರ ವಯಸ್ಸಿನ ಕಾರಣದಿಂದ ಮುಖ್ಯಮಂತ್ರಿ ಸ್ಥಾನದಿಂದ ಇಳಿದರು. ಯಡಿಯೂರಪ್ಪ ಅವರು ರಾಜ್ಯದ ಉದ್ದಗಲಕ್ಕೂ ಹೋರಾಟ ಮಾಡಿದ್ದಾರೆ. ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಾರೆ’ ಎಂದು ಬಣ್ಣಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT