ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಲೋಕಸಭಾ: ಕೇಂದ್ರ ಸಚಿವ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

Published 15 ಏಪ್ರಿಲ್ 2024, 7:04 IST
Last Updated 15 ಏಪ್ರಿಲ್ 2024, 7:04 IST
ಅಕ್ಷರ ಗಾತ್ರ

ಬೀದರ್: ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ನಗರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು.

ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ, ಮುಖಂಡರಾದ ಬಸವರಾಜ ಆರ್ಯ, ಎಂ.ಜಿ. ಮುಳೆ ಅವರೊಂದಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.

'ಭಗವಂತ ಖೂಬಾ ಅವರು ಸಾಂಕೇತಿಕವಾಗಿ, ಸರಳ ರೀತಿಯಲ್ಲಿ ಕೆಲ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಏ. 18ರಂದು ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಕೆ ಸಲ್ಲಿಸುವರು' ಎಂದು ಅವರ ಆಪ್ತ ಸಹಾಯಕ ಅಮರ್ ಹಿರೇಮಠ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ಗೆದ್ದಿರುವ ಖೂಬಾ ಅವರು ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT