ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ವೆಚ್ಚಕ್ಕಾಗಿ ಒಯ್ಯುತ್ತಿದ್ದ ಹಣ: ಬಿಜೆಪಿ

Published 22 ಏಪ್ರಿಲ್ 2024, 0:20 IST
Last Updated 22 ಏಪ್ರಿಲ್ 2024, 0:20 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದ ಸುಮಾರು ₹2 ಕೋಟಿ ಹಣ ಮೈಸೂರು ಮತ್ತು ಮೈಸೂರು ಗ್ರಾಮಾಂತರದ ಚುನಾವಣಾ ಕಾರ್ಯಾಲಯ, ಚುನಾವಣಾ ವೆಚ್ಚಕ್ಕಾಗಿ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣಗೌಡ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಬ್ಯಾಂಕಿನಿಂದ ಹಣ ತೆಗೆದಿದ್ದಕ್ಕೆ ಎಲ್ಲ ದಾಖಲೆಗಳನ್ನು ಹೊಂದಿದೆ. ಕಾಂಗ್ರೆಸ್‌ನ ಸಚಿವ ಕೃಷ್ಣಬೈರೇಗೌಡರ ಕುಮ್ಮಕ್ಕಿನಿಂದ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಹಣ ಅಕ್ರಮ ಸಾಗಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಸ್ಸೀಮತೆ ಹೊಂದಿದೆ. ತಾನು ಕಳ್ಳ, ಪರರನ್ನು ನಂಬ ಎಂಬ ಸ್ಥಿತಿ ಕಾಂಗ್ರೆಸ್ಸಿಗರದು. ಕಾಂಗ್ರೆಸ್ ಹಿಂದಿನಿಂದಲೇ ಹಣ, ಹೆಂಡ ಮತ್ತು ತೋಳ್ಬಲದ ಮೂಲಕ ಗೆಲುವು ಸಾಧಿಸುತ್ತಿತ್ತು. ಈಚಿನ ದಿನಗಳಲ್ಲಿ ಪಂಚರಾಜ್ಯಗಳ ಚುನಾವಣೆ ನಡೆದಾಗ ಕಾಂಗ್ರೆಸ್ ಮುಖಂಡರು ಗುತ್ತಿಗೆದಾರರಿಂದ ಹಣ ಸಂಗ್ರಹಿಸಿ ತೆಲಂಗಾಣ ಮತ್ತಿತರ ರಾಜ್ಯಗಳಲ್ಲಿ ಬಳಸಿಕೊಂಡಿದ್ದರು ಎಂದು ಅವರು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT