ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಎಚ್.ಡಿ.ಕುಮಾರಸ್ವಾಮಿ ಗೆಲುವು ಖಚಿತ: ಆರ್‌. ಅಶೋಕ

Published 14 ಏಪ್ರಿಲ್ 2024, 14:20 IST
Last Updated 14 ಏಪ್ರಿಲ್ 2024, 14:20 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು 2 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಭಾನುವಾರ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರ ಬೈಕ್‌ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆ ಜೆಡಿಎಸ್‌ ಭ್ರಕೋಟೆ, ಜತೆಗೆ ಈ ಬಾರಿ ಬಿಜೆಪಿಯ ಬೆಂಬಲ ಕೂಡ ಇದೆ. ಎಚ್‌.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಹಾಗಾಗಿ ಜನರು ಅವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಸಿ.ಟಿ. ರವಿ ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ಈ ಜಿಲ್ಲೆಯವರೇ ಆದರೂ ಇಲ್ಲಿನ ಜನರಿಗೆ ಅಪರಿಚಿತರು . ಜನರು ಅವರ ಮುಖವನ್ನೇ ನೋಡಿಲ್ಲ. ಹಣ ಇದೆ ಎಂಬ ಕಾರಣಕ್ಕೆ ಸ್ಟಾರ್‌ ಚಂದ್ರು ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಕೊಟ್ಟಿದ್ದು, ಅವರನ್ನು ಬಲಿಪಶು ಮಾಡಲಿದ್ದಾರೆ ಎಂದರು.

ಬಿಜೆಪಿ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್‌. ರಮೇಶ್‌, ಪ್ರಧಾನ ಕಾರ್ಯದರ್ಶಿ ಬಿ.ಸಿ. ಸಂತೋಷಕುಮಾರ್‌, ಮುಖಂಡರಾದ ಇಂಡುವಾಳು ಸಚ್ಚಿದಾನಂದ, ದರ್ಶನ್‌ ಲಿಂಗರಾಜು, ಪುರಸಭೆ ಸದಸ್ಯ ಗಂಜಾಂ ಶಿವು ಇದ್ದರು. ಪಟ್ಟಣದ ಚೆಕ್‌ಪೋಸ್ಟ್‌ನಿಂದ ಬೊಮ್ಮೂರು ಅಗ್ರಹಾರ, ನಗುವನಹಳ್ಳಿ ಗೇಟ್‌ ಮಾರ್ಗವಾಗಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಬೈಕ್‌ ರ್ಯಾಲಿಯಲ್ಲಿ ಮೈಸೂರು ಕಡೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT