ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಮೋದಿ ಸರ್ಕಾರದ ಸಾಧನೆ ಶೂನ್ಯ: ಸೌಮ್ಯಾ ರೆಡ್ಡಿ

ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ಕಾಂಗ್ರೆಸ್‌ನ ಬೂತ್‌ಮಟ್ಟದ ಕಾರ್ಯಕರ್ತರ ಸಭೆ
Published 4 ಏಪ್ರಿಲ್ 2024, 16:17 IST
Last Updated 4 ಏಪ್ರಿಲ್ 2024, 16:17 IST
ಅಕ್ಷರ ಗಾತ್ರ

ಬೊಮ್ಮನಹಳ್ಳಿ : ‘ಮೋದಿ ಸರ್ಕಾರದ ಬಳಿ ಮಾತನಾಡಲು ಯಾವುದೇ ವಿಷಯಗಳಿಲ್ಲದೇ ಅವರ ರಿಪೋರ್ಟ್ ಕಾರ್ಡ್‌ನಲ್ಲಿ ಸೊನ್ನೆಗಳೇ ತುಂಬಿವೆ. ಹೀಗಾಗಿ ಅವರು ದೇವರು, ಧರ್ಮ, ಇ.ಡಿ, ಐಟಿ, ಸಿಬಿಐ ಮೊರೆ ಹೋಗಿದ್ದಾರೆ’ ಎಂದು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಕೇಂದ್ರ ಸರ್ಕಾರವನ್ನು ಕುಟುಕಿದರು.

ಗುರುವಾರ ಹೆಚ್ಎಸ್ಆರ್ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

‘ಸಾರ್ವಜನಿಕರಲ್ಲಿ ಮತ ಕೇಳಲು ಬಿಜೆಪಿಯವರಿಗೆ ಮುಖವಿಲ್ಲ. ಅವರು ತಮ್ಮ ಸುಳ್ಳಿನ ಫ್ಯಾಕ್ಟರಿ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಇಂಥ ವಿಚಾರಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಬೇಕು’ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪಾರ್ಲಿಮೆಂಟ್‌ನಲ್ಲಿ ಒಮ್ಮೆಯೂ ತುಟಿ ಬಿಚ್ಚದ ಸಂಸದ ತೇಜಸ್ವಿಸೂರ್ಯ, ಭಾವನಾತ್ಮಕ ವಿಚಾರಗಳಿಗೆ ರೆಕ್ಕೆಪುಕ್ಕ ಕಟ್ಟಿ, ಸಾಮರಸ್ಯ ಕದಡುವ ಯತ್ನ ಮಾಡುತ್ತಿದ್ದಾರೆ. ಇದೇ ಅವರ ಕಾಯಕವಾಗಿದೆ. ಕೋವಿಡ್ ಸಮಯದಲ್ಲಿ ಬೆಡ್ ಬ್ಲಾಕ್ ಮಾಡಿ, ಅದನ್ನು ಅಮಾಯಕ ಮುಸ್ಲಿಂ ಯುವಕರ ತಲೆಗೆ ಕಟ್ಟುವ ಯತ್ನ ನಡೆಸಿದ್ದರು. ಇವೆಲ್ಲವನ್ನು ಇಲ್ಲಿನ ಜನತೆ ಮರೆತಿಲ್ಲ. ಈ ಚುನಾವಣೆಯಲ್ಲಿ ಜನ ಪಾಠ ಕಲಿಸಲಿದ್ದಾರೆ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ವಾಸುದೇವರೆಡ್ಡಿ, ‘ಮೋದಿ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಕನ್ನಡಿಗರು ಕಣ್ಣಾರೆ ಕಂಡಿದ್ದಾರೆ. ಈ ತಾರತಮ್ಯ ಮತ್ತು ಬೆಲೆ ಏರಿಕೆ, ನಿರುದ್ಯೋಗ, ರೂಪಾಯಿ ಅಪಮೌಲ್ಯ, ಮಿತಿಮೀರಿದ ಭ್ರಷ್ಟಾಚಾರ ಸೇರಿದಂತೆ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಗಳ ಕುರಿತು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಲಿದ್ದಾರೆ. ಹಾಗೆಯೇ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿಕಾರ್ಯಗಳ ಬಗ್ಗೆ ಜನರಿಗೆ ತಿಳಿಸಲಿದ್ದಾರೆ’ ಎಂದರು.

ಮಾಜಿ ಶಾಸಕ ನಾರಾಯಣಸ್ವಾಮಿ, ಮಾಜಿ ಮೇಯರ್ ಮಂಜುನಾಥರೆಡ್ಡಿ, ಕಾಂಗ್ರೆಸ್ ಮುಖಂಡ ಉಮಾಪತಿ ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಓ.ಮಂಜುನಾಥರೆಡ್ಡಿ, ಗ್ಯಾರಂಟಿ ಯೋಜನೆ ಬೆಂಗಳೂರು ನಗರ ಅಧ್ಯಕ್ಷ ಜಿ.ಕೃಷ್ಣಪ್ಪ, ಯುವ ಕಾಂಗ್ರೆಸ್ ಮುಖಂಡ ಅನಿಲ್ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT