ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಮಪತ್ರ ಸಲ್ಲಿಕೆಗೂ ಮುನ್ನ ಮಠಾಧೀಶರ ಪಾದಪೂಜೆ ಮಾಡಿದ ಮೃಣಾಲ್‌ ಹೆಬ್ಬಾಳಕರ

Published 15 ಏಪ್ರಿಲ್ 2024, 6:43 IST
Last Updated 15 ಏಪ್ರಿಲ್ 2024, 6:43 IST
ಅಕ್ಷರ ಗಾತ್ರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಸೋಮವಾರ ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು.

ಸಚಿವೆ ಲಕ್ಷ್ಮಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಪತ್ನಿ ಹಿತಾ ಭಾಗವಹಿಸಿದರು.

ಬಳಿಕ ವಿವಿಧ ಮಠಾಧೀಶರು ಸಚಿವರ ನಿವಾಸಕ್ಕೆ ಆಗಮಿಸಿ ಆಶೀರ್ವದಿಸಿದರು. ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕಾರಂಜಿ ಮಠದ ಗುರುಸಿದ್ದ ಸ್ವಾಮೀಜಿ ಸೇರಿದಂತೆ 20 ಮಠಾಧೀಶರು ಆಶೀರ್ವದಿಸಿದರು.

2 ಲಕ್ಷ ಮತಗಳ ಅಂತರದಿಂದ ಗೆಲುವು:

'ಮೃಣಾಲ್‌ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ' ಎಂದು ಲಕ್ಷ್ಮಿ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದರು.

ನಂತರ ಕುಟುಂಬ ಸಮೇತ ಸುಳೇಭಾವಿಯಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ, ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಹಟ್ಟಿಹೊಳಿಯಲ್ಲಿ ವೀರಭದ್ರೇಶ್ವರ ಹಾಗೂ ಸುಳೇಭಾವಿಯಲ್ಲಿ ಲಕ್ಷ್ಮಿದೇವಿ ಪೂಜೆ ಮಾಡಿದ್ದೇವೆ. ಗುರುಗಳನ್ನು ಮನೆಗೆ ಕರೆದು ಪಾದ ಪೂಜೆ ಮಾಡಿದ್ದು, ವಿಜಯಯಾತ್ರೆಯ ಸಂಕಲ್ಪ ಇಟ್ಟುಕೊಂಡು ಪೂಜೆ ಮಾಡಿದ್ದೇವೆ' ಎಂದು ಹೇಳಿದರು.

ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ  
ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ  

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಸೋಮವಾರ ಒಳ್ಳೆಯ ಮಹೂರ್ತವಿದ್ದ ಕಾರಣ ಸರಳವಾಗಿ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಶಾಸಕ ರಮೇಶ ಜಾರಕಿಹೊಳಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ, ಸಂಸದೆ ಮಂಗಲಾ ಅಂಗಡಿ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ವಿಜಯದ ಸಂಕೇತ ತೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT