ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಮೋದಿ, ಸಿದ್ದರಾಮಯ್ಯ ಪ್ರಚಾರ ನಾಳೆ

Published 26 ಏಪ್ರಿಲ್ 2024, 20:19 IST
Last Updated 26 ಏಪ್ರಿಲ್ 2024, 20:19 IST
ಅಕ್ಷರ ಗಾತ್ರ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಏಪ್ರಿಲ್ 28)  ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸುವರು.

ಬೆಳಗಾವಿ ನಗರದಲ್ಲಿ ಮೋದಿ ಭಾಷಣ ಮಾಡುವರು, ಸಿದ್ದರಾಮಯ್ಯ ಅವರು ಜಿಲ್ಲೆಯ ಯರಗಟ್ಟಿ ಪಟ್ಟಣ, ಕಾಗವಾಡ ತಾಲ್ಲೂಕಿನ ಉಗಾರ ಖುರ್ದ ಗ್ರಾಮದಲ್ಲಿ ಪ್ರಚಾರ ನಡೆಸುವರು. ಇಬ್ಬರೂ ಒಂದೇ ದಿನ ಪ್ರಚಾರ ನಡೆಸುವ ಕಾರಣ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್‌ ತಿಳಿಸಿದರು.

ಶನಿವಾರ ಸಂಜೆ 7.30ರ ಸುಮಾರಿಗೆ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ, ಅಲ್ಲಿಂದ ನೇರವಾಗಿ ಐಟಿಸಿ ವೆಲ್‌ಕಮ್‌ ಹೋಟೆಲ್‌ಗೆ ತೆರಳಿ ವಾಸ್ತವ್ಯ ಮಾಡುವರು. ಭಾನುವಾರ ಬೆಳಿಗ್ಗೆ 10ಕ್ಕೆ ಇಲ್ಲಿನ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು.

‘ಪ್ರಧಾನಿಯವರ ಕಾರ್ಯಕ್ರಮಕ್ಕೆ 75 ಸಾವಿರಕ್ಕೂ ಹೆಚ್ಚು ಕುರ್ಚಿಗಳ ವ್ಯವಸ್ಥೆ ಮಾಡಿದ್ದೇವೆ. 60 ಎಲ್‌ಇಡಿ ಪರದೆ ಅಳವಡಿಕೆಗೆ ಸೂಚಿಸಿದ್ದೇವೆ. 500 ಸ್ವಯಂ ಸೇವಕರನ್ನು ನಿಯೋಜಿಸಿದ್ದೇವೆ’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT