ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ್ದು, ಅಭಿಮಾನಿಗಳ ಒತ್ತಡಕ್ಕೆ ಮಣಿದು ಮಹತ್ವದ ಘೋಷಣೆ ಮಾಡಿದ್ದಾರೆ. ಕಾರ್ಯಕರ್ತರು, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಸುಮಲತಾ, ನನ್ನ ಹಾಗೂ ಅಂಬರೀಶ್ ಅಭಿಮಾನಿಗಳಿಗೆ 5 ವರ್ಷದ ರಾಜಕೀಯ ಜೀವನ ನೀಡಿದ್ದು ಮಂಡ್ಯದ ಜನ. ಇಂದು ನನ್ನ ಜೊತೆಯಲ್ಲಿ ಹಾಗೂ ಅಂಬರೀಶ್ ಅವರ ರಾಜಕೀಯ ಜೀವನದಲ್ಲಿದ್ದ ಎಲ್ಲಾ ಅಭಿಮಾನಿಗಳು ಧನ್ಯವಾದ. ನನಗೆ ರಾಜಕೀಯ ಅನುಭವ ಇಲ್ಲದ ಸಂದರ್ಭದಲ್ಲಿ ನನ್ನ ಜೊತೆ ಇದ್ದೀರಿ. 5 ವರ್ಷದಲ್ಲಿ ಕಣ್ಣೀರು ಹಾಕಿದ ದಿನಗಳು ಇದೆ. ನಾನು ಸ್ವಾರ್ಥದಿಂದ ನನ್ನ ಹೆಜ್ಜೆ ಹಾಕಿಕೊಳ್ಳಬಹುದಿತ್ತು. ಆದರೆ ನಾನು ನಿಮಗೆ ಕೊಟ್ಟಿರುವ ವಾಗ್ದಾನ ಮೀರಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಅಲ್ಲದೆ ಏಪ್ರಿಲ್ 3 ರಂದು ಮಂಡ್ಯದಲ್ಲಿ ಸಭೆ ನಡೆಸಿ ಅಲ್ಲಿಯೇ ನಾನು ನಿರ್ಧಾರ ತಿಳಿಸುತ್ತೇನೆ ಎಂದರು. ಈ ಮೂಲಕ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯಬಹುದು ಎನ್ನುವ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.