ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ

Published 16 ಏಪ್ರಿಲ್ 2024, 7:22 IST
Last Updated 16 ಏಪ್ರಿಲ್ 2024, 7:22 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಅವರು ಪಕ್ಷದ ಮುಖಂಡರು ಹಾಗೂ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ನಗರದ ಮಧಲಾ ಮಾರುತಿ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಸಾಗಿದರು.

ಮೋದಿ, ಬಿಜೆಪಿ ಮತ್ತು ರಮೇಶ ಜಿಗಜಿಣಗಿ ಪರ ಘೋಷಣೆಗಳು ಮೊಳಗಿದವು. ಮೋದಿ ಕಟೌಟ್ ಮೋದಿ ಮುಖವಾಡಗಳನ್ನು ತೊಟ್ಟ ಪಕ್ಷದ ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು ಘೋಷಣೆ ಕೂಗುವ ಮೂಲಕ ಗಮನ ಸೆಳೆದರು.

ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಒಂಟೆಗಳು, ಹಲಗೆ, ಡೊಳ್ಳು ವಾದನ‌ ಗಮನ‌ ಸೆಳೆಯಿತು.

ಪ್ರಣಾಳಿಕೆ ಬಿಡುಗಡೆ:

ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ನಡೆದ ಸಭೆಯಲ್ಲಿ ಅಭ್ಯರ್ಥಿ ರಮೇಶ ಜಿಗಜಿಣಗಿ, ಸಿ.ಟಿ.ರವಿ ಮತ್ತು ಮುಖಂಡರು ಲೋಕಸಭಾ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಸಂಸದ ಉಮೇಶ ಜಾಧವ, ಮುಖಂಡ ಸಿ.ಟಿ.ರವಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮುಖಂಡರಾದ ಅರುಣ ಶಹಾಪೂರ, ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ವಿಜು ಗೌಡ ಪಾಟೀಲ, ಉಮೇಶ ಕೋಳಕೂರ ಹಾಗೂ ಜೆಡಿಎಸ್ ಮುಖಂಡರು ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT