ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಲೋಕಸಭಾ: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

Published 15 ಏಪ್ರಿಲ್ 2024, 8:07 IST
Last Updated 15 ಏಪ್ರಿಲ್ 2024, 8:07 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಸೋಮವಾರ ನಾಮಪತ್ರ ಸಲ್ಲಿಸಿದರು.

ನಗರದ ಸಿದ್ಧೇಶ್ವರ ಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಾಸಕರಾದ ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠ್ಠಲ ಕಟಕಧೋಂಡ, ಸಿ.ಎಸ್.ನಾಡಗೌಡ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ, ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಕನಾನ್ ಮುಶ್ರೀಫ್, ಸಂಗಮೇಶ ಬಬಲೇಶ್ವರ, ಮಹಾಂತೇಶ ಬಿರಾದಾರ, ಶರಣಪ್ಪ ಸುಣಗಾರ, ಸೋಮನಾಥ ಕಳ್ಳಿಮನಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ ಮತ್ತಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಬಿಸಿಲಿನ ಅಬ್ಬರದ ನಡುವೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡು, ಲೋಕಸಭಾ ಚುನಾವಣೆ ಕಾವು ಹೆಚ್ಚಿಸಿದರು.

ಲಂಬಾಣಿ ಸಮಾಜದ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಡೊಳ್ಳು, ವಾದ್ಯಗಳ ನಿನಾದದ ನಡುವೆ ಕಾಂಗ್ರೆಸ್ ಚುನಾವಣೆ ರಣ ಕಹಳೆ ಮೊಳಗಿಸಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT