ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಬಿಜೆಪಿ ಟಿಕೆಟ್: ಪ್ರಧಾನಿ ನೇತೃತ್ವದ ಸಭೆಯಲ್ಲಿ ತೀರ್ಮಾನ- ಶೆಟ್ಟರ್

Published 19 ಮಾರ್ಚ್ 2024, 16:03 IST
Last Updated 19 ಮಾರ್ಚ್ 2024, 16:03 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಚುನಾವಣಾ ಸಮಿತಿ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದ್ದು, ಬೆಳಗಾವಿ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವರು’ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್ ಹೇಳಿದರು.

ನವದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಭೆಯಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳುವರು ಎಂಬ ವಿಶ್ವಾಸವಿದೆ’ ಎಂದರು.

‘ಬೆಳಗಾವಿಯ ಬಿಜೆಪಿ ನಾಯಕರಾದ ಪ್ರಭಾಕರ ಕೋರೆ, ಅಭಯ ಪಾಟೀಲ, ಈರಣ್ಣ ಕಡಾಡಿ ಸೇರಿ ಶಾಸಕರು, ಮಾಜಿ ಶಾಸಕರು ಹಾಗೂ ಹಲವು ನಾಯಕರ ಜೊತೆ ಚರ್ಚಿಸಿದ್ದೇನೆ. ಪಕ್ಷದ ತೀರ್ಮಾನದಂತೆ ಕೆಲಸ ಮಾಡಲು ಬದ್ಧರಿರುವುದಾಗಿ ಹೇಳಿದ್ದಾರೆ. ಟಿಕೆಟ್ ತಪ್ಪಿಸಲು ಮುಂದಾದವರ ಬಗ್ಗೆ ಮಾತನಾಡಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT