ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಮೈತ್ರಿ: ಕುಮಾರಸ್ವಾಮಿ

ಪ್ರಚಾರ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ
Published 20 ಏಪ್ರಿಲ್ 2024, 12:43 IST
Last Updated 20 ಏಪ್ರಿಲ್ 2024, 12:43 IST
ಅಕ್ಷರ ಗಾತ್ರ

ಶಿರಾ: ‘ದೇಶದ ಅಭಿವೃದ್ಧಿಗೆ ಮೋದಿ ಅನಿವಾರ್ಯ. ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ‌ ಶುಕ್ರವಾರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ‌ ಕಾರಜೋಳ ಅವರ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು.

‘ಕೃಷ್ಣ, ಮಹದಾಯಿ, ಭದ್ರಾ ಯೋಜನೆ ಕುಂಠಿತವಾಗಲು ಕಾಂಗ್ರೆಸ್ ಕಾರಣ. ಬಿಜೆಪಿ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಪ್ರಧಾನಿ ಮನವೊಲಿಸಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಬದ್ಧರಾಗಿದ್ದೇವೆ’ ಎಂದರು.

ಕಾಂಗ್ರೆಸ್ ದಲಿತರನ್ನು ಮತಬ್ಯಾಂಕ್ ಮಾಡಿಕೊಂಡಿದೆ. ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ತಡೆದವರು ಇವರೇ ಎಂದರು.

ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್ ಮಾತನಾಡಿ, ‘ಶಿರಾ ಕ್ಷೇತ್ರದಿಂದ 1.20 ಲಕ್ಷ ಮತಗಳನ್ನು ಗೋವಿಂದ ಕಾರಜೋಳ ಅವರಿಗೆ ಕೊಡಿಸುವ ಮೂಲಕ ಶಕ್ತಿ ಪ್ರದರ್ಶಿಸಬೇಕು ಎಂದರು.

ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮಾತನಾಡಿ, ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುವ ಮೂಲಕ ದೇಶವನ್ನು ದಿವಾಳಿ ಮಾಡಲು ಹೊರಟಿದೆ. ಪ್ರಧಾನಿ ಮೋದಿ ಅವರು ಜನರನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಯೋಜನೆ ರೂಪಿಸುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕುಂಠಿತವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, ಎಚ್.ಡಿ.ದೇವೇಗೌಡ ಅವರನ್ನು 10 ತಿಂಗಳಲ್ಲಿ ಪ್ರಧಾನಿ ಸ್ಥಾನದಿಂದ ಇಳಿಸುವ ಮೂಲಕ‌ ಕಾಂಗ್ರೆಸ್‌ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಭಾರತಿಶೆಟ್ಟಿ ಕೆ.ಎಸ್.ನವೀನ್, ಮಾಜಿ ಶಾಸಕ ತಿಮ್ಮರಾಯಪ್ಪ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಅಂಜಿನಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ, ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಮುಡಿಮಡು ರಂಗಶ್ವಾಮಯ್ಯ, ಚಂಗಾವರ ಮಾರಣ್ಣ, ಎಸ್.ರಾಮಕೃಷ್ಣ, ಆರ್.ರಾಮು, ಆರ್.ರಾಘವೇಂದ್ರ, ಉಮಾ ವಿಜಯರಾಜು, ಸತ್ಯಪ್ರಕಾಶ್, ಗಿರಿಧರ್, ಚಿಕ್ಕಣ್ಣ, ಮುಡಿಮಡು ಮಂಜುನಾಥ್ ಪಾಲ್ಗೊಂಡಿದ್ದರು.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT