ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ಏ.23ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಭಾಗವಹಿಸುವರು ಎಂದು ಪುತ್ತೂರು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಯೋಜಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳುವರು. ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ರೋಡ್ ಶೋ ನಡೆಯಲಿದೆ. ಸಂಜೆ 5.30ಕ್ಕೆ ವಿಟ್ಲದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ ಎಂದು ಅವರು ತಿಳಿಸಿದರು.

ಏ.21ರಂದು ಬೆಳಿಗ್ಗೆಯಿಂದ ಸಂಜೆವರೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 221 ಬೂತ್ಗಳಲ್ಲಿ ಕಾರ್ಯಕರ್ತರಿಂದ ಮನೆ ಮನೆ ಭೇಟಿ ಮತಯಾಚನೆಯ ಅಭಿಯಾನ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಹಕಾರ ಭಾರತಿಯಡಿಯಲ್ಲಿ ಗೆದ್ದ ಸಹಕಾರಿ ಸಂಘಗಳ ನಿರ್ದೇಶಕರ ಸಭೆ ನಡೆಸಲಾಗಿದೆ ಎಂದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಮಂಗಳೂರು ವಿಭಾಗದ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.