ಬೆಂಗಳೂರು: ‘ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಸಚಿವ ಪ್ರಿಯಾಂಕ್ ಖರ್ಗೆ ‘ಚೋರ್ ಗುರು ಚಾಂಡಾಲ್ ಶಿಷ್ಯ’ ಎಂದು 'ಎಕ್ಸ್’ ಮಾಡುವ ಮೂಲಕ ಅಪಮಾನ ಮಾಡಿದ್ದಾರೆ’ ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಹಿನ್ನೆಲೆಯಲ್ಲಿ ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಪ್ರಿಯಾಂಕ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಸಾಂವಿಧಾನಿಕ ಪದ ಬಳಕೆ ಆಕ್ಷೇಪಾರ್ಹ. ಪ್ರಿಯಾಂಕ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಇದೇ ವಿಚಾರವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.