ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ವಿಜಯೇಂದ್ರ ಕರೆ ಸ್ವೀಕರಿಸದ ಮಾಧುಸ್ವಾಮಿ

Published 20 ಮಾರ್ಚ್ 2024, 15:42 IST
Last Updated 20 ಮಾರ್ಚ್ 2024, 15:42 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗದೇ ಮುನಿಸಿಕೊಂಡಿರುವ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ದೂರವಾಣಿ ಕರೆಯನ್ನು ಸ್ವೀಕರಿಸಲಿಲ್ಲ ಎಂದು ಮೂಲಗಳು ಹೇಳಿವೆ.

ದೆಹಲಿಯಿಂದ ಮರಳಿದ ವಿಜಯೇಂದ್ರ ಅವರು ಮಾಧುಸ್ವಾಮಿ ಜತೆ ಮಾತನಾಡಲು ದೂರವಾಣಿ ಕರೆ ಮಾಡಿದಾಗ ಅವರು ಕರೆಯನ್ನು ಸ್ವೀಕರಿಸಲಿಲ್ಲ. ಬದಲಿಗೆ ಅವರ ಆಪ್ತ ಸಹಾಯಕ ಮಾತನಾಡಿ, ‘ಸಾಹೇಬರು ಮಾತನಾಡುವುದಿಲ್ಲವಂತೆ‘ ಎಂದು ಹೇಳಿದರು. ಈ ಸಂದರ್ಭದಲ್ಲಿ ‘ಮಾತನಾಡೋದು ಏನಿದೆ’ ಎಂದು ಮಾಧುಸ್ವಾಮಿ ಸಿಟ್ಟಿನಿಂದ ಹೇಳಿದ್ದು ವಿಜಯೇಂದ್ರ ಅವರಿಗೆ ಕೇಳಿಸಿತು. ಮತ್ತೊಮ್ಮೆ ಕರೆ ಮಾಡಿದರು. ಆಗಲೂ ಮಾಧುಸ್ವಾಮಿ ಕರೆಯನ್ನು ಸ್ವೀಕರಿಸಲಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT