ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿಗಳಿಗೆ ಪ್ರತಿಯಾಗಿ ಮತ ನೀಡಿ: ಪ್ರಿಯಂಕಾ ಜಾರಕಿಹೊಳಿ

Published 25 ಏಪ್ರಿಲ್ 2024, 4:24 IST
Last Updated 25 ಏಪ್ರಿಲ್ 2024, 4:24 IST
ಅಕ್ಷರ ಗಾತ್ರ

ಹುಕ್ಕೇರಿ: ‘ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಪ್ರತಿಯಾಗಿ ಮಹಿಳೆಯರು ಈ ಬಾರಿಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.

ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ ಪುರುಷರಿಗೆ ಮಾತ್ರವಲ್ಲದೇ ಮಹಿಳೆಯರಿಗೂ ಟಿಕೆಟ್‌ ನೀಡಿ ಸ್ತ್ರೀಯರ ಪರವಾಗಿ ನಿಂತಿದೆ’ ಎಂದರು.

‘ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಅಧಿಕಾರ ಹಿಡಿದವರು, ಇಲ್ಲಿಯ ತನಕ ಒಂದೂ ಉದ್ಯೋಗ  ಸೃಷ್ಟಿಸಿಲ್ಲ. ಬಿಜೆಪಿಯ ಸುಳ್ಳು ಭರವಸೆ ನಂಬಿ ಮತ ಹಾಕಬೇಡಿ’ ಎಂದರು.

ವಿವಿಧ ಗ್ರಾಮಗಳಲಲ್ಲಿ ಪ್ರಿಯಂಕಾ ಅವರಿಗೆ ಮಹಿಳೆಯರು ಆರತಿ ಎತ್ತಿ, ಹೂ ಮಾಲೆ ಹಾಕಿ ಸ್ವಾಗತಿಸಿದರು. ಮಾಜಿ ಸಚಿವ ಎ.ಬಿ.ಪಾಟೀಲ, ಶಶಿಕಾಂತ ನಾಯಿಕ, ಮುಖಂಡರಾದ ಜಯಪ್ರಕಾಶ ಕರಜಗಿ, ವಿನೋದ ನಾಯಿಕ, ದಿಲೀಪ್ ಹೊಸಮನಿ, ಚಿದಾನಂದ ಕರ್ದನ್ನವರ, ಪ್ರವೀಣ ನೇಸರಿ, ವಿಕ್ರಮ್ ಕರನಿಂಗ, ತಬ್ರೇಜ್ ಹಜರತಭಾಯ್ ಮುಕ್ತಾರ್ ನದಾಫ್ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT