ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಸ್ಥಾನ ಗೆಲ್ಲದ ಸ್ಥಿತಿ ಕಾಂಗ್ರೆಸ್‌ನದು: ಬಿ.ವೈ.ವಿಜಯೇಂದ್ರ

Published 5 ಏಪ್ರಿಲ್ 2024, 16:23 IST
Last Updated 5 ಏಪ್ರಿಲ್ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ನವರು ನೂರಿನ್ನೂರು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, 40 ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲದ ದಾರುಣ ಸ್ಥಿತಿಗೆ ಆ ಪಕ್ಷ ತಲುಪಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

‘ಕೇಂದ್ರದಲ್ಲಿ ಸರ್ಕಾರ ರಚಿಸುವ ಹಗಲುಗನಸನ್ನು ಕಾಣುತ್ತಿದ್ದಾರೆ. ಇಂಡಿ ಒಕ್ಕೂಟದಲ್ಲಿ ಪ್ರಧಾನಮಂತ್ರಿಯಾಗಲು ಲಾಯಕ್ಕಾಗಿರುವ ಒಬ್ಬ ನಾಯಕನಾದರೂ ಇದ್ದಾರೆಯೇ’ ಎಂದು ಪ್ರಶ್ನಿಸಿದರು. ‘ರಾಜ್ಯದ ಜನತೆ ಸಿದ್ದರಾಮಯ್ಯ ಸರ್ಕಾರದ ಪೊಳ್ಳು ಭರವಸೆಗಳಿಗೆ ಮಾರು ಹೋಗುವುದಿಲ್ಲ. ಮುಖ್ಯಮಂತ್ರಿಯವರು ಇನ್ನಾದರೂ ಜನರಿಗೆ ಯಾಮಾರಿಸುವುದನ್ನು ನಿಲ್ಲಿಸಬೇಕು. ಪ್ರಧಾನಿ ಮೋದಿ ಅವರ ಸಮಕ್ಕೆ ನಿಲ್ಲುವ ಒಬ್ಬ ನಾಯಕನೂ ಇಲ್ಲದ ಇಂಡಿ ಒಕ್ಕೂಟವು ಹೇಳ ಹೆಸರಿಲ್ಲದಂತಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT