ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ದುರ್ಬಲ ಆಡಳಿತಗಾರ: ಸಿ.ಟಿ.ರವಿ

Published 20 ಮಾರ್ಚ್ 2024, 16:10 IST
Last Updated 20 ಮಾರ್ಚ್ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನೇ ಸ್ಟ್ರಾಂಗ್‌ ಎನ್ನುವ ಸಿದ್ದರಾಮಯ್ಯ ಅವರೇ ನಿಮ್ಮ ಪರಿಸ್ಥಿತಿ ಏನಿದೆ? ಐದು ವರ್ಷ ಮುಖ್ಯಮಂತ್ರಿ ಆಗಿರುವ ಖಾತರಿಯೇ ನಿಮಗಿಲ್ಲ’ ಎಂದು ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು.

‘ನಾನೇ  ಐದು ವರ್ಷ ಸಿಎಂ ಎಂದು ಪದೇ ಪದೇ ಹೇಳಿಕೊಂಡು ಓಡಾಡುವ ಸ್ಥಿತಿ ಅವರಿಗೆ ಬಂದಿದೆ.  ಸಿದ್ದರಾಮಯ್ಯ ಅತ್ಯಂತ ದುರ್ಬಲ ಆಡಳಿತಗಾರ’ ಎಂದು ರವಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕಳೆದೊಂದು ವರ್ಷವನ್ನು ಗಮನಿಸಿದರೆ ಆಡಳಿತದ ಹಿಡಿತವೇ ಅವರಿಗೆ ಸಿಕ್ಕಿಲ್ಲ ಎಂದು ಅರಿವಾಗುತ್ತದೆ. ನೀವೇ ನೇಮಕ ಮಾಡಿಕೊಂಡ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಸಲಹೆಗಾರರು ಅಭಿವೃದ್ಧಿಗೆ ಬಿಡಿಗಾಸು ಕೊಡುತ್ತಿಲ್ಲ ಎಂದು ನಿಮ್ಮ ಗುಣಗಾನ ಮಾಡಿದ್ದಾರೆ’ ಎಂದು ವ್ಯಂಗ್ಯವಾಗಿ ಹೇಳಿದರು.

‘ಹಿರಿಯ ಸಚಿವರು ಮತ್ತು ಶಾಸಕರೇ ನಿಮ್ಮ ಸ್ಟ್ರಾಂಗ್ ಆಡಳಿತಕ್ಕೆ ಸರ್ಟಿಫಿಕೇಟ್‌ ಕೊಟ್ಟಿದ್ದಾರೆ. ನಿಮ್ಮ ಸರ್ಕಾರದ ನೀತಿಯ ಪರಿಣಾಮವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳಾ ದೌರ್ಜನ್ಯ ಮಾತ್ರವಲ್ಲ, ಬೆತ್ತಲೆ ಮೆರವಣಿಗೆ ನಡೆಯುತ್ತಿದೆ. ರಾಮೇಶ್ವರ ಕೆಫೆ ಬಾಂಬ್‌ ಸ್ಫೋಟ ಆಗುತ್ತದೆ, ಹನುಮಾನ್‌ ಚಾಲೀಸ ಹಾಕುವುದು ಕೂಡ ಗಲಭೆಗೆ ಕಾರಣವಾಗುಷ್ಟು ಆಡಳಿತ ಹದಗೆಟ್ಟಿದೆ’ ಎಂದು ಟೀಕಿಸಿದರು.

‘ಪ್ರಧಾನಿ ಮೋದಿ ಅವರು ಬಲಿಷ್ಠ ನಾಯಕ ಎಂದು ಕೇವಲ ನಮ್ಮ ಪಕ್ಷ, ನಮ್ಮ ನಾಯಕರು ಮತ್ತು ಕಾರ್ಯಕರ್ತರು ಹೇಳುತ್ತಿಲ್ಲ. ದೇಶದ ಜನತೆ ಮಾತ್ರವಲ್ಲದೆ ವಿಶ್ವದ ಅಗ್ರಗಣ್ಯ ನಾಯಕರೂ ಮೋದಿಯವರನ್ನು ಅತ್ಯಂತ ಬಲಿಷ್ಠ ನಾಯಕರು ಎನ್ನುತ್ತಾರೆ ’ ಎಂದು ರವಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT