ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ದೇವಸ್ಥಾನ ಬಳಿಯ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಕುರ್ಚಿ ತೆಗೆಸಿದ್ದಕ್ಕೆ ಈಶ್ವರಪ್ಪ ಕೋಪಗೊಂಡಿದ್ದಾರೆ. ಅನುಮತಿ ಪಡೆದರೂ ವೇದಿಕೆ ಮೇಲಿನ ಕುರ್ಚಿ ತೆಗೆದಿದ್ದಾರೆ. ಇದು ಕಾಂಗ್ರೆಸ್ ಹಾಗೂ ಯಡಿಯೂರಪ್ಪ ಹೊಂದಾಣಿಕೆ ಮಾಡಿಕೊಂಡು ತೆಗೆಸಿರಬಹುದು ಎಂದು ಕಿಡಿಕಾರಿದ್ದಾರೆ. ಅಲ್ಲದೆ ಯಡಿಯೂರಪ್ಪ ಅವರ ಪುತ್ರನ ಸೋಲಿನಿಂದ ಈ ರೀತಿ ಗೂಂಡಾಗಿರಿ ಮಾಡುತ್ತಿದ್ದಾರೆ ಹೀಗೆ ತೊಂದರೆ ಕೊಟ್ಟರೆ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.