ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ‘ಇಂಡಿಯಾ’ ಮೈತ್ರಿಕೂಟ ಭ್ರಷ್ಟಾಚಾರಿಗಳ ಕೂಟ: ನಡ್ಡಾ

Published 30 ಏಪ್ರಿಲ್ 2024, 14:50 IST
Last Updated 30 ಏಪ್ರಿಲ್ 2024, 14:50 IST
ಅಕ್ಷರ ಗಾತ್ರ

ಹಾವೇರಿ: ‘ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ‘ಇಂಡಿಯಾ’ ಮೈತ್ರಿಕೂಟವು ಭ್ರಷ್ಟಾಚಾರಿಗಳ ಕೂಟವಾಗಿದೆ. ಕಾಂಗ್ರೆಸ್ ಯಾವಾಗಲೂ ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುತ್ತಾ ಬಂದಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ 2ಜಿ ಹಗರಣ, ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹಗರಣ, ಅಕ್ಕಿ ಹಗರಣ ಸೇರಿದಂತೆ ಸಾಲು ಹಗರಣಗಳು ನಡೆದಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆರೋಪಿಸಿದರು. 

ಬ್ಯಾಡಗಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ಪರವಾಗಿ ಮಂಗಳವಾರ ಬೃಹತ್ ರೋಡ್ ಶೋ‌ ನಡೆಸಿ ಅವರು ಮಾತನಾಡಿದರು. ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಡಿ.ಎಂ.ಕೆ ನಾಯಕರು ಎಲ್ಲರೂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ದೂರಿದರು. 

‘ಇಂಡಿಯಾ’ ಮೈತ್ರಿಕೂಟದ ಬಹುತೇಕ ನಾಯಕರು ಜೈಲು ಮತ್ತು ಬೇಲ್‌ ಮೇಲೆ ಇದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾರ್ತಿ ಚಿದಂಬರಂ, ಲಾಲು ಪ್ರಸಾದ್, ಡಿ.ಕೆ. ಶಿವಕುಮಾರ್ ಎಲ್ಲರೂ ಬೇಲ್ ಮೇಲೆ ಇದ್ದಾರೆ. ಅರವಿಂದ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ. ಇಂತಹ ನಾಯಕರು ನಮಗೆ ಬೇಕಾ? ಎಂದು ಪ್ರಶ್ನಿಸಿದರು.

ಮೋದಿಯವರು ನಿಮಗೆ ಕಿಸಾನ್ ಸಮ್ಮಾನ್ ನೀಡಿದ್ದಾರಲ್ವಾ, ಉಜ್ವಲ ಗ್ಯಾಸ್ ನೀಡಿದ್ದಾರಲ್ವಾ, ನೀರು ನೀಡಿದ್ದಾರಲ್ವಾ, ಮೋದಿ ಭಾರತವನ್ನು ಆರ್ಥಿಕತೆಯಲ್ಲಿ ವಿಶ್ವದ ಐದನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿದರೆ ಭಾರತವನ್ನು ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿ ಮಾಡುತ್ತಾರೆ ಎಂದರು.

ನಿಮ್ಮ ಉತ್ಸಾಹ ನೋಡಿದರೆ ಬೊಮ್ಮಾಯಿ ಅವರನ್ನು ಸಂಸತ್ ಸದಸ್ಯರನ್ನಾಗಿ ಮಾಡುವ ತೀರ್ಮಾನ ಮಾಡಿದ್ದೀರಿ. ಇದು ಬೊಮ್ಮಾಯಿಯವರ ಚುನಾವಣೆಯಲ್ಲ. ಮೋದಿಯವರು ‘ವಿಕಸಿತ ಭಾರತ’ ಮಾಡಲು ಚುನಾವಣೆ ನಡೆಯುತ್ತಿದೆ. ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬಿ.ಸಿ. ಪಾಟೀಲ್, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಜೆ.ಪಿ.ನಡ್ಡಾ ಅವರು, ಕಾಗಿನೆಲೆ ಗುರುಪೀಠಕ್ಕೆ ಭೇಟಿ ನೀಡಿ, ಗುರುಪೀಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT