ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ

Published 24 ಏಪ್ರಿಲ್ 2024, 6:11 IST
Last Updated 24 ಏಪ್ರಿಲ್ 2024, 6:11 IST
ಅಕ್ಷರ ಗಾತ್ರ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಪ್ರಚಾರ ನಡೆಸಲಿದ್ದಾರೆ.

ಅಂದು ಮಧ್ಯಾಹ್ನ 1ಕ್ಕೆ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವರು.

ನರೇಂದ್ರ ಮೋದಿ ಅವರು 5ನೇ ಬಾರಿಗೆ ದಾವಣಗೆರೆಗೆ ಆಗಮಿಸುತ್ತಿದ್ದು,ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಮೋದಿ ಆಗಮನ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದ್ದು, ಗಾಯತ್ರಿ ಸಿದ್ದೇಶ್ವರ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುವ ಸಂಕಲ್ಪ ಮಾಡಿದ್ದೇವೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಸುದ್ದಿಗಾರರಿಗೆ ತಿಳಿಸಿದರು.

ಮೋದಿ ಆಗಮನದ ನಿಮಿತ್ತ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಹಂದರಗಂಬ ಪೂಜೆ ನೆರವೇರಿಸಲಾಯಿತು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮುಖಂಡರಾದ ಎ.ಎಚ್.ಶಿವಯೋಗಿಸ್ವಾಮಿ, ಯಶವಂತರಾವ್ ಜಾಧವ್, ಕೊಳೇನಹಳ್ಳಿ ಸತೀಶ್, ವೈ.ಮಲ್ಲೇಶ್, ಜಿ.ಎಸ್.ಅನಿತ್ ಕುಮಾರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT