ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ ಬಿಟ್ಟು ಬೇರೆ ಕಡೆ ಸ್ಪರ್ಧಿಸಲ್ಲ: ಸುಮಲತಾ

Published 20 ಮಾರ್ಚ್ 2024, 15:19 IST
Last Updated 20 ಮಾರ್ಚ್ 2024, 15:19 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಏನೇ ರಾಜಕೀಯ ಮಾಡಿದರೂ ಅದು ಮಂಡ್ಯದಲ್ಲಿ. ಇದನ್ನು ವರಿಷ್ಠರಿಗೆ ಹೇಳಿ ಬಂದಿದ್ದೇನೆ. ಬಿಜೆಪಿ ವರಿಷ್ಠರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಇದೇ 22ರವರೆಗೆ ಕಾಯುವಂತೆಯೂ ಹೇಳಿದ್ದಾರೆ’ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿದರು.

ದೆಹಲಿಯಿಂದ ವಾಪಸಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೆಂಗಳೂರು ಉತ್ತರ ಕ್ಷೇತ್ರಕ್ಕೇ ನಾನು ಹೋಗಲಿಲ್ಲ. ಇನ್ನು ಚಿಕ್ಕಬಳ್ಳಾಪುರಕ್ಕೆ ಹೋಗುತ್ತೇನೆಯೇ? ಮಂಡ್ಯ ಕ್ಷೇತ್ರವನ್ನು ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. 

ದೆಹಲಿಗೆ ತೆರಳಿದ್ದ ಸುಮಲತಾ ಅವರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಆ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಸೂಚಿಸಲಾಗಿತ್ತು ಎಂಬ ಚರ್ಚೆಗಳು ನಡೆದಿದ್ದವು. ‘ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸಿ ಏನು ಮಾಡಲಿ’ ಎಂದು ಸುಮಲತಾ ಪ್ರಶ್ನಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟ ಭಾಗವಾಗಿರುವ ಜೆಡಿಎಸ್‌ಗೆ ಮಂಡ್ಯವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ. ಮಂಡ್ಯ ತಮಗೆ ಸಿಗಲಿದೆ ಎಂದು ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ, ಅಲ್ಲಿಂದಲೇ ಸ್ಪರ್ಧಿಸುವ ಸುಳಿವನ್ನೂ ಕುಮಾರಸ್ವಾಮಿ ನೀಡಿದ್ದಾರೆ. 

‌ಈ ಬೆಳವಣಿಗೆಗಳ ಮಧ್ಯೆಯೇ, ಸುಮಲತಾ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT