ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯದುವೀರ್ ಪರ ಪ್ರಚಾರ: ತ್ರಿಷಿಕಾ

Published 20 ಏಪ್ರಿಲ್ 2024, 14:01 IST
Last Updated 20 ಏಪ್ರಿಲ್ 2024, 14:01 IST
ಅಕ್ಷರ ಗಾತ್ರ

ಮೈಸೂರು: ‘ಪತಿ ಯದುವೀರ್ ಬಹಳ ಸರಳ ವ್ಯಕ್ತಿ. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದು, ಗೆಲ್ಲುವ ವಿಶ್ವಾಸವಿದೆ’ ಎಂದು ಪತ್ನಿ ತ್ರಿಷಿಕಾ ಕುಮಾರಿ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ‘ಅವರಿಗೆ ಜನರು ಆಶೀರ್ವದಿಸಲಿದ್ದಾರೆ. ಈ ಹಿಂದೆಯೂ ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ. ಆದರೆ, ಆಗ ಕ್ಯಾಮೆರಾಗಳು ಇರುತ್ತಿರಲಿಲ್ಲ; ಪ್ರಚಾರ ಸಿಗುತ್ತಿರಲಿಲ್ಲ. ಹೀಗಾಗಿ ಅದು ಗೊತ್ತಾಗುತ್ತಿರಲಿಲ್ಲ. ಈಗ ಪ್ರಚಾರ ಆಗುತ್ತಿದೆ’ ಎಂದು ಪ್ರತಿಕ್ರಿಯಿಸಿದರು.

‘ಪ್ರಚಾರ ಮೊದಲಾದ ವಿಷಯಗಳ ಬಗ್ಗೆ ನಿತ್ಯವೂ ನನ್ನೊಂದಿಗೆ ಮಾತನಾಡುತ್ತಾರೆ. ನಾನೂ ಅವರೊಂದಿಗೆ ಪ್ರಚಾರ ಮಾಡಲಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT