ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಚಿಕ್ಕಬಳ್ಳಾಪುರ ಕಣದಲ್ಲಿ ಮೂವರು ಸುಧಾಕರ್!

Published 8 ಏಪ್ರಿಲ್ 2024, 23:30 IST
Last Updated 8 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರೊಂದಿಗೆ ಈ ಬಾರಿ ಅದೇ ಹೆಸರಿನ ಇನ್ನೂ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸುಧಾಕರ್ ಎನ್. ಮತ್ತು ಡಿ.ಸುಧಾಕರ ಹೆಸರಿನ ಮತ್ತಿಬ್ಬರು ಪಕ್ಷೇತರ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಸುಧಾಕರ್ ಎನ್. ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋಶೆಟ್ಟಹಳ್ಳಿ ಗ್ರಾಮದವರು. ಡಿ.ಸುಧಾಕರ ದೇವನಹಳ್ಳಿ ತಾಲ್ಲೂಕಿನ ಕುರುಬರಕುಂಟೆ ಗ್ರಾಮದವರು.

11 ತಿಂಗಳ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿಯೂ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ಸ್ಪರ್ಧಿಸಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸುಧಾಕರ್ ಎನ್‌. ಸ್ಪರ್ಧೆ ಮಾಡಿದ್ದರು. 

ಮತದಾರರನ್ನು ಗೊಂದಲಕ್ಕೆ ಸಿಲುಕಿಸಲು ಒಂದೇ ಹೆಸರಿನ ಹಲವರಿಂದ ನಾಮಪತ್ರ ಹಾಕಿಸುವ ತಂತ್ರಗಾರಿಕೆ ಇತ್ತೀಚಿನ ವರ್ಷಗಳಲ್ಲಿ ಮುನ್ನೆಲೆಗೆ ಬಂದಿದೆ. 2019ರ ಲೋಕಸಭೆ ಚುನಾವಣೆ ವೇಳೆ ಭಾರಿ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹೆಸರಿನ ಏಳು ಮಂದಿಯನ್ನು ಕಣಕ್ಕಿಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT