ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: 63 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

Published 20 ಏಪ್ರಿಲ್ 2024, 15:23 IST
Last Updated 20 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಗೆ ಉಮೇದುವಾರಿಕೆ ಬಯಸಿ ನಾಮಪತ್ರ ಸಲ್ಲಿಸಿದ್ದ 63 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿವೆ.

ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಲು 335 ಅಭ್ಯರ್ಥಿಗಳು ಒಟ್ಟು 503 ನಾಮಪತ್ರ ಸಲ್ಲಿಸಿದ್ದರು. ಶನಿವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ 109 ನಾಮಪತ್ರಗಳು ತಿರಸ್ಕೃತವಾಗಿವೆ. 46 ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಸಿದ್ದರು. ಕ್ರಮಬದ್ಧವಲ್ಲದ ನಾಮಪತ್ರ ಸಲ್ಲಿಸಿದ್ದ 63 ಅಭ್ಯರ್ಥಿಗಳು ಸ್ಪರ್ಧೆಯ ಅವಕಾಶ ಕಳೆದುಕೊಂಡಿದ್ದಾರೆ. 

ನಾಮಪತ್ರ ಹಿಂಪಡೆಯಲು ಏ.22 ಕೊನೆಯ ದಿನ. ಈ ಎಲ್ಲ 14 ಕ್ಷೇತ್ರಗಳಿಗೂ ಮೇ 7ರಂದು ಮತದಾನ ನಡೆಯಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT