ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮತದಾರರಲ್ಲಿ ಉತ್ಸಾಹ ಮೂಡಿಸಿದ ಗ್ಯಾರಂಟಿಗಳು: ಡಿ.ಸುಧಾಕರ್

Published 5 ಏಪ್ರಿಲ್ 2024, 15:35 IST
Last Updated 5 ಏಪ್ರಿಲ್ 2024, 15:35 IST
ಅಕ್ಷರ ಗಾತ್ರ

ಧರ್ಮಪುರ: ‘ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು ಮತದಾರರಲ್ಲಿ ಉತ್ಸಾಹ ಮೂಡಿಸಿವೆ.  ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ’ ಎಂದು ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.

ಸಮೀಪದ ಖಂಡೇನಹಳ್ಳಿಯ ಶನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಖಂಡೇಹಳ್ಳಿ ಪಾಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚನೆ ಮಾಡುವ ವೇಳೆ ಮಾತನಾಡಿದರು.

‘ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ ಚಕಾರವೆತ್ತಲಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಆವರಿಸಿದೆ. ₹ 18 ಸಾವಿರ ಕೋಟಿ ಬರ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಯಾವ ರೀತಿಯ ಪರಿಹಾರ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದು ಹೇಳಿದರು.

ಮುಖಂಡರಾದ ಗೀತಾ ನಂದಿನಿಗೌಡ, ಯತೀಶ್, ಎಸ್.ಆರ್.ತಿಪ್ಪೇಸ್ವಾಮಿ, ಖಾದಿ ರಮೇಶ್, ತಿಮ್ಮಣ್ಣ, ನಾಗಪ್ಪ, ರಾಜಣ್ಣ, ಕೆ.ಪುಟ್ಟಸ್ವಾಮಿಗೌಡ, ಚಿದಾನಂದ, ಈಶ್ವರಪ್ಪ, ಸುಬ್ಬಣ್ಣ, ರಾಘವೇಂದ್ರ, ಕೃಷ್ಣ, ಹನುಮಂತರಾಯ ಉಪಸ್ಥಿತರಿದ್ದರು.

‘ಬೆಳೆ ವಿಮೆ ವಿತರಣೆಯಲ್ಲಿ ತಾರತಮ್ಯ’

ಶೇಂಗಾ ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗಿದ್ದು ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ತಾರತಮ್ಯವಾಗಿದೆ. ಅಬ್ಬಿನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ವಿಮೆ ಬಂದಿಲ್ಲ. ಖಂಡೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಒಂದು ಎಕರೆಗೆ ₹ 2000 ಜಮೆಯಾಗಿದೆ. ಬೇರೆ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಪ್ರತಿ ಎಕರೆಗೆ ₹ 15 ಸಾವಿರ ಜಮೆಯಾಗಿದ್ದು. ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ ಎಂದು ಖಂಡೇನಹಳ್ಳಿ ರೈತರು ಸಚಿವರ ಗಮನಕ್ಕೆ ತಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT