ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣ ಸ್ವಾರಸ್ಯ: ಇವರು ಗೆದ್ದರೆ ಮೂರು ಕಡೆ ಉಪ ಚುನಾವಣೆ

Published 11 ಏಪ್ರಿಲ್ 2024, 23:30 IST
Last Updated 11 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾದ ಕೆಲವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಸಾಮಾನ್ಯವಾಗಿದೆ. ಹೀಗಾಗಿ, ಒಂದು ವರ್ಷದ ಆಸುಪಾಸು ಕೆಲವು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದೂ ಸಹಜ ಎಂಬಂತೆ ಆಗಿದೆ. 

ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದು ಒಂದು ವರ್ಷದಲ್ಲೇ ಲೋಕಸಭೆ ಚುನಾವಣೆ ನಡೆಯುತ್ತಿದೆ. 2008, 2013, 2018, 2013ರಲ್ಲಿ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಈ ಅವಧಿಯಲ್ಲಿ ‘ಮೈತ್ರಿ’ಸರ್ಕಾರದ ಪ್ರಯೋಗ ನಡೆದರೂ ವಿಧಾನಸಭೆಗೆ ಅವಧಿಪೂರ್ವ ಚುನಾವಣೆ ನಡೆದಿಲ್ಲ. 2009, 2014, 2019ರಲ್ಲಿ ಲೋಕಸಭೆಗೆ ಚುನಾವಣೆ ನಡೆದಿತ್ತು.

2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೂವರು, ಈಗ ವಿವಿಧ ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ. ಇವರು ಲೋಕಸಭೆಗೆ ಆಯ್ಕೆಯಾದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಆರು ತಿಂಗಳೊಳಗೆ ಈ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಾಗುತ್ತದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT