ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಸಿ.ಎಂ. ಆಗಿ ಮುಂದುವರಿಯಲು ಹಿಟ್ನಾಳ ಪರ ಪ್ರಚಾರ: ಇಕ್ಬಾಲ್‌ ಅನ್ಸಾರಿ

Published 2 ಏಪ್ರಿಲ್ 2024, 14:44 IST
Last Updated 2 ಏಪ್ರಿಲ್ 2024, 14:44 IST
ಅಕ್ಷರ ಗಾತ್ರ

ಕೊಪ್ಪಳ: ಸ್ಥಳೀಯ ನಾಯಕರೊಂದಿಗಿನ ಭಿನ್ನಾಭಿಪ‍್ರಾಯದಿಂದ ಹಿಂದಿನ ವಿಧಾನಸಭಾ ಚುನಾವಣೆ ನಂತರ ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಮಾಜಿ ಸಚಿವ ಗಂಗಾವತಿಯ ಇಕ್ಬಾಲ್‌ ಅನ್ಸಾರಿ ಈಗ ಮುನಿಸು ಕಡಿಮೆ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎನ್ನುವ ಕಾರಣಕ್ಕೆ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಮತಯಾಚನೆಗೆ ಸಿದ್ಧರಾಗಿದ್ದಾರೆ. ಇತ್ತೀಚೆಗೆ ಅನ್ಸಾರಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡಿದ್ದ ಸಿ.ಎಂ. ಮುನಿಸು ಶಮನಮಾಡಿದ್ದರು.

‘ಸಿದ್ದರಾಮಯ್ಯ ಸಿ.ಎಂ. ಆಗಿ ಮುಂದುವರಿಯಲು ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ. ಎಲ್ಲರೂ ಕಾರ್ಯಪ್ರವೃತ್ತರಾಗಿ’ ಎಂದು ತಮ್ಮ ಬೆಂಬಲಿಗರಿಗೆ ಅನ್ಸಾರಿ ಆಡಿಯೊ ಸಂದೇಶ ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT