ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣ ಸ್ವಾರಸ್ಯ: ಅಧಿಕ ‘ಲೋಕಾ’ಧಿಪತಿಗಳು

Published 13 ಏಪ್ರಿಲ್ 2024, 23:30 IST
Last Updated 13 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಈ ಬಾರಿ ಲೋಕಸಭೆಗೆ ಸ್ಪರ್ಧಿಸುವವರ ಪೈಕಿ 9 ಜನ ಮತ್ತೊಮ್ಮೆ ಸಂಸತ್‌ ಭವನ ಪ್ರವೇಶಿಸುವ ಉಮೇದಿನಲ್ಲಿದ್ದಾರೆ. 

ಕರ್ನಾಟಕದಿಂದ ಕೆ.ಎಚ್‌. ಮುನಿಯಪ್ಪ 1991ರಿಂದ 2019ರವರೆಗೂ 28 ವರ್ಷಗಳು ಸಂಸತ್‌ ಸದಸ್ಯರಾಗಿದ್ದರು. 10 ವರ್ಷ ಕೇಂದ್ರ ಸಚಿವರಾಗಿದ್ದರು. ಪ್ರಸ್ತುತ ನಡೆಯುತ್ತಿರುವ 18ನೇ ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಕೆಲ  ಕ್ಷೇತ್ರಗಳ ಅಭ್ಯರ್ಥಿಗಳು ಸತತವಾಗಿ ಗೆಲವು ಸಾಧಿಸುತ್ತಾ ಬಂದಿದ್ದು, ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಪ್ರಸ್ತುತ ಕಣಕಕ್ಕೆ ಇಳಿದಿರುವ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ ವಿಜಯಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಅತಿ ಹೆಚ್ಚು ಬಾರಿ ಆಯ್ಕೆಯಾದವರು. 6 ಬಾರಿ ಸಂಸದರಾಗಿ, ಏಳನೇ ಬಾರಿ ಅದೃಷ್ಟ ಪರೀಕ್ಷೆಗೆ ಒಡ್ಡಿದ್ದಾರೆ. ಕಾಂಗ್ರೆಸ್‌ನಲ್ಲಿ ಅತಿ ಹೆಚ್ಚು ಅಂದರೆ, ನಾಲ್ಕನೇ ಬಾರಿ ಸ್ಪರ್ಧಿಸುತ್ತಿರುವ ಏಕೈಕ ಅಭ್ಯರ್ಥಿ ಡಿ.ಕೆ. ಸುರೇಶ್‌. ರಾಘವೇಂದ್ರ (2018) ಮತ್ತು ಸುರೇಶ್‌ (2013) ಒಂದು ಬಾರಿ ಉಪಚುನಾವಣೆಯಲ್ಲಿ ಗೆದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT