ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಸಭೆ ನಡೆಸಿಲ್ಲ, ಮನವಿ ಸ್ವೀಕರಿಸಿದ್ದೇನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

Published 20 ಮಾರ್ಚ್ 2024, 12:38 IST
Last Updated 20 ಮಾರ್ಚ್ 2024, 12:38 IST
ಅಕ್ಷರ ಗಾತ್ರ

ಬೆಳಗಾವಿ: ‘ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಅದನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಮನೆಗೆ ಬಂದಿದ್ದರು. ನಾನು ಚುನಾವಣೆಯ ಕಾರಣ ಸಭೆ ನಡೆಸಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಚುನಾವಣಾಧಿಕಾರಿಗಳ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ಈಗ ಗ್ಯಾರಂಟಿ ಯೋಜನೆಗಳು, ಪಲ್ಸ್‌ ಪೋಲಿಯೊ ಕಾರ್ಯಕ್ರಮದ ಒತ್ತಡ ಹೆಚ್ಚಾಗಿದೆ. ಬಿಎಲ್‌ಒ ಆಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕಾರ್ಯಕರ್ತೆಯರು ಮನವಿ ನೀಡಿದ್ದಾರೆ. ಅವರಿಗೆ ನಾನೇ ತಿಳಿಹೇಳಿ ಕಳಿಸಿದ್ದೇನೆ’ ಎಂದರು.

‘ನನ್ನ ಗೃಹಕಚೇರಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ. ಚುನಾವಣೆ ವೇಳೆ ವಿರೋಧಿಗಳು ದೂರು ನೀಡುವುದು ಸಾಮಾನ್ಯ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ನಾನು ನಿಯಮ ಉಲ್ಲಂಘಿಸುವುದಿಲ್ಲ. ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಇದು ಐದನೇ ಚುನಾವಣೆ. ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT