ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ‍ಪರಿಹಾರ ನೀಡದೆ ಘೋರ ಅನ್ಯಾಯ: ಬಿಜೆಪಿ ವಿರುದ್ಧ ಜೈರಾಮ್ ರಮೇಶ್‌ ಕಿಡಿ

Published 20 ಏಪ್ರಿಲ್ 2024, 16:20 IST
Last Updated 20 ಏಪ್ರಿಲ್ 2024, 16:20 IST
ಅಕ್ಷರ ಗಾತ್ರ

ನವದೆಹಲಿ: ತೆರಿಗೆ ಪಾಲು ಹಾಗೂ ಬರ ಪರಿಹಾರ ನೀಡದೆ ಕೇಂದ್ರದ ಬಿಜೆಪಿ ಸರ್ಜಾರವು ಕರ್ನಾಟಕಕ್ಕೆ ಘೋರ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ರಾಜ್ಯದ ಬರಪೀಡಿತ ಜನರಿಗೆ ₹18,172 ಕೋಟಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡುತ್ತಿಲ್ಲ ಏಕೆ ಎಂದೂ ಪ್ರಶ್ನಿಸಿದೆ. 

ಬರ ‍ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರವು ಸೆಪ್ಟೆಂಬರ್‌ನಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಕೇಂದ್ರ ತಜ್ಞರ ತಂಡವು ನವೆಂಬರ್‌ನಲ್ಲಿ ವರದಿ ಸಲ್ಲಿಸಿದೆ. ಕೇಂದ್ರ ಸರ್ಕಾರವು ಡಿಸೆಂಬರ್‌ನಲ್ಲಿ ಹಣ ಬಿಡುಗಡೆ ಮಾಡಬೇಕಿತ್ತು. ಚುನಾವಣಾ ನೀತಿಸಂಹಿತೆ ಕಾರಣಕ್ಕೆ ಪರಿಹಾರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದ್ದಾರೆ. ಇದೊಂದು ನೆಪ ಅಷ್ಟೇ. ಮೋದಿ ಸರ್ಕಾರದ ವಿಳಂಬ ನೀತಿಯಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ’ ಎಂದು ಕಾಂಗ್ರೆಸ್‌ ‍ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್‌ ದೂರಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT